ದೇಶದ ವಿವಿಧ ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳಲ್ಲಿ ಪ್ರಧಾನಿ ಮೋದಿ ಬಗ್ಗೆ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯುತ್ತಿರುವ ಮಧ್ಯೆ, ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ ಹೊರಗೆ ಶುಕ್ರವಾರ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ವಿದ್ಯಾರ್ಥಿಗಳು ಘೋಷಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ವಿಶ್ವವಿದ್ಯಾಲಯದ ಕಲಾ ವಿಭಾಗದ ಹೊರಗೆ CrPC ಯ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ.
ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವಿದ್ಯಾರ್ಥಿ ಸಂಘಟನೆ NSUI-KSU ಕರೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 (ದೊಡ್ಡ ಸಭೆಗಳನ್ನು ನಿಷೇಧಿಸುವುದು) ಅನ್ನು ವಿಧಿಸಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಹೊರಗೆ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಬಿಬಿಸಿ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರವನ್ನು ವಿಮರ್ಶಾತ್ಮಕವಾಗಿ ಚರ್ಚಿಸಿದೆ. ಗಲಭೆ ವೇಳೆ ಪ್ರಧಾನಿ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸಾಕ್ಷ್ಯಚಿತ್ರವು 2002 ರ ಹಿಂಸಾಚಾರವನ್ನು ಸ್ವತಂತ್ರವಾಗಿ ತನಿಖೆ ನಡೆಸಿದ್ದ ಇಂಗ್ಲೇಂಡ್‌ನ ಅಧಿಕಾರಿಗಳನ್ನು ಸಂದರ್ಶಿಸಿತ್ತು, ಜೊತೆಗೆ ಗಲಭೆಯನ್ನು ವರದಿ ಮಾಡಿದ್ದ ಬಿಬಿಸಿ ಪತ್ರಕರ್ತರನ್ನು ಕೂಡಾ ಸಂದರ್ಶಿಸಿದೆ.
#WATCH | Students & members of NSUI protesting outside the Faculty of Arts at the University of Delhi, being detained by the Police
Provisions u/s 144 CrPC are imposed outside the Faculty,in wake of a call by NSUI-KSU for screening of a BBC documentary on PM Modi, at the Faculty pic.twitter.com/EYWjubCSfy
— ANI (@ANI) January 27, 2023
ಒಕ್ಕೂಟ ಸರ್ಕಾರವು ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ. ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.
ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.
Delhi | A large number of security personnel deployed outside the Faculty of Arts at the University of Delhi in wake of a call by NSUI-KSU for the screening of a BBC documentary on PM Modi, at the Faculty. Provisions under Section 144 CrPC imposed outside the Faculty. pic.twitter.com/zPZvGhygbe
— ANI (@ANI) January 27, 2023
ಚಿತ್ರ ಪ್ರದರ್ಶನದ ನಂತರ, ಸಾಕ್ಷ್ಯಚಿತ್ರದ ಬಗ್ಗೆ ಸಂವಾದ ನಡೆಸಲಾಗಿದೆ ಎಂದು ವಿದ್ಯಾರ್ಥಿ ಹೇಳಿದ್ದಾರೆ. ಇಷ್ಟೆ ಅಲ್ಲದೆ, ಸೆನ್ಸಾರ್‌ಶಿಪ್‌ನಿಂದಾಗಿ ಉಂಟಾಗುವ ಸಮಸ್ಯೆಗಳು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಗಳು ಮತ್ತು ವಿಶ್ವವಿದ್ಯಾಲಯದಲ್ಲಿ ದಮನ ಸಂಸ್ಕೃತಿಯ ಕುರಿತು ಚರ್ಚೆ ನಡೆಯಿತು ಎಂದು ವಿದ್ಯಾರ್ಥಿ ಹೇಳಿದ್ದಾರೆ.
ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.
ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.
#WATCH | A fresh commotion breaks out outside Faculty of Arts at University of Delhi as Police detain a few members of the students' wing of Bhim Army.
Sec 144 CrPC imposed outside the Faculty. NSUI-KSU has given a call for screening of BBC documentary on PM Modi, at the Faculty pic.twitter.com/jCxpFj5Dah
— The Times Of India (@timesofindia) January 27, 2023
ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!


