Homeಚಳವಳಿಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ...

ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾಗಿ ಬಿಬಿಸಿ ರಚಿಸಿರುವ ‘‘ಇಂಡಿಯಾ: ಮೋದಿ ಪ್ರಶ್ನೆ” ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜವಾಹರ್‌‌‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘ ಪ್ರದರ್ಶಿಸಲು ಯೋಜಿಸಿದೆ. ಆದರೆ ಈ ಪ್ರದರ್ಶನವನ್ನು ರದ್ದುಗೊಳಿಸುವಂತೆ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಕೇಳಿದೆ.

ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜನವರಿ 24 ರಂದು ರಾತ್ರಿ 9 ಗಂಟೆಗೆ ನಿಗದಿ ಪಡಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಜೆಎನ್‌ಯು ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಸಲಹೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾರ್ಯಕ್ರಮಕ್ಕೆ ಆಡಳಿತದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ ಎಂದು ರಿಜಿಸ್ಟ್ರಾರ್ ಹೇಳಿದ್ದು,‘‘ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು” ಎಂದು ಸಲಹೆ ಹೇಳಿದೆ.

“ಸಂಬಂಧಿತ ವಿದ್ಯಾರ್ಥಿಗಳು/ವ್ಯಕ್ತಿಗಳು ಪ್ರಸ್ತಾವಿತ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸುವಂತೆ ದೃಢವಾಗಿ ಸೂಚಿಸಲಾಗಿದೆ. ಅದು ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಟ್ಟುನಿಟ್ಟಾದ ಶಿಸ್ತು ಕ್ರಮವನ್ನು ಪ್ರಾರಂಭಿಸಬಹುದು” ಎಂದು ರಿಜಿಸ್ಟ್ರಾರ್‌ ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಐಷೆ ಘೋಷ್‌ ಅವರು,“ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ವು ‘ನಿಷೇಧಿಸಿದ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ.” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಪ್ರದರ್ಶನವನ್ನು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಕಚೇರಿಯಲ್ಲಿ ಪ್ರದರ್ಶಿಸುವುದಾಗಿ ಅವರು ಹಂಚಿಕೊಂಡಿರುವ ಪೋಸ್ಟರ್‌‌ನಲ್ಲಿ ಬರೆಯಲಾಗಿದೆ.

2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೇಂದ್ರದ CAA ನಂತಹ ಕೆಲವು ನೀತಿಗಳನ್ನು ಒಳಗೊಂಡಿರುವ ಬಗ್ಗೆ “ಭಾರತ: ಮೋದಿ ಪ್ರಶ್ನೆ” ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವು ಚರ್ಚಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ಸಾಕ್ಷ್ಯಚಿತ್ರವು ಪಕ್ಷಪಾತದಿಂದ ಕೂಡಿದ್ದು, ವಸ್ತುನಿಷ್ಠತೆಯ ಕೊರತೆ ಮತ್ತು ಇನ್ನೂ ಮುಂದುವರಿದ ವಸಾಹತುಶಾಹಿ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...