Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಗುಜರಾತ್ ಹತ್ಯಾಕಾಂಡ ಘಟನೆಯ ಕುರಿತು ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಎನ್ನುವ ಸಾಕ್ಷ್ಯಚಿತ್ರವನ್ನು ಬಿಬಿಸಿ ಬಿಡುಗಡೆ ಮಾಡಿತ್ತು. ಈ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರದರ್ಶನದ ಪ್ರಯತ್ನ ಮಾಡಿರುವುದಕ್ಕೆ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಯೊಬ್ಬರನ್ನು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಒಂದು ವರ್ಷ ಡಿಬಾರ್ ಮಾಡಲಾಗಿತ್ತು. ವಿಶ್ವವಿದ್ಯಾಲಯದ ಈ ನಿರ್ಧಾರದ ವಿರುದ್ಧ ಸಂಶೋಧನಾ ವಿದ್ಯಾರ್ಥಿ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಗುರುವಾರ ಹೈಕೋರ್ಟ್, ದೆಹಲಿ ವಿಶ್ವವಿದ್ಯಾಲಯದ ನಿಲುವು ಏನು? ಎಂದು ಕೇಳಿದೆ.

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ಮತ್ತು ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಲೋಕೇಶ್ ಚುಗ್ ಅವರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರ ಏಕಸದಸ್ಯ ಪೀಠವು, ದೆಹಲಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಶ್ವವಿದ್ಯಾಲಯದ ಪರ ವಕೀಲರಿಗೆ ಉತ್ತರವನ್ನು ಸಲ್ಲಿಸುವಂತೆ ಕೇಳದೆ. ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

ಜನವರಿ 27ರಂದು ದೆಹಲಿ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ “ನಿಷೇಧಿಸಲಾದ BBC ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು ಎಂದು ಚುಗ್ ಅವರ ಮನವಿಯಲ್ಲಿ ತಿಳಿಸಲಾಗಿದೆ. ಆ ಸಂದರ್ಭದಲ್ಲಿ ಚುಗ್ ಪ್ರತಿಭಟನಾ ಸ್ಥಳದಲ್ಲಿ ಇರಲಿಲ್ಲ ಮತ್ತು ಯಾವುದೇ ರೀತಿಯಲ್ಲಿ ಪ್ರದರ್ಶನದಲ್ಲಿ ಭಾಗವಹಿಸಿರಲಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಚುಗ್ ಅವರು ವಿಜ್ಞಾನ ವಿಭಾಗದ ಮಾನವಶಾಸ್ತ್ರ ವಿಭಾಗದಿಂದ ತಮ್ಮ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

”ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವಾಗ ಕಲಾ ವಿಭಾಗದ ಹೊರಗೆ ತಾನು ಮಾಧ್ಯಮಗಳಿಗೆ ನೇರ ಸಂದರ್ಶನ ನೀಡುತ್ತಿದ್ದೆ. ಅಲ್ಲಿ ಶಾಂತಿ ಕದಡುವ ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದರು. ಆದರೆ ನಾನು ಯಾವುದೇ ರೀತಿಯ ಪ್ರಚೋದನೆ, ಹಿಂಸೆ ಅಥವಾ ಶಾಂತಿ ಭಂಗ ತಂದಿಲ್ಲ ಹಾಗಾಗಿ ಆಗ ಪೊಲೀಸರು ನನ್ನನ್ನು ಬಂಧಿಸಿಲ್ಲ ಮತ್ತು ನನ್ನ ಮೇಲೆ ಯಾವ ಆರೋಪವನ್ನೂ ಹೊರಿಸಿಲ್ಲ” ಎಂದು ಅವರ ಮನವಿಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಸಾಕ್ಷ್ಯಚಿತ್ರದ ಪ್ರದರ್ಶನದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ವಿಶ್ವಿದ್ಯಾಲಯದ ಶಿಸ್ತುಪಾಲನಾಧಿಕಾರಿ ಶೋಕಾಸ್ ನೋಟಿಸ್ ನೀಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಫೆಬ್ರವರಿ 20ರಂದು ಅವರು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಿರುವ ಬಗ್ಗೆಯೂ ಚುಗ್ ಅವರ ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 3ರಂದು, ಅವರು ತಮ್ಮ ಪಿಎಚ್‌ಡಿ ಪ್ರಬಂಧವನ್ನು ಸಲ್ಲಿಸಿದರು. ಆದರೆ, ರಿಜಿಸ್ಟಾರ್ ಅವರು, ಮಾರ್ಚ್ 10ರಂದು, ಒಂದು ವರ್ಷದವರೆಗೆ ಯಾವುದೇ ವಿಶ್ವವಿದ್ಯಾಲಯ/ಕಾಲೇಜು/ಇಲಾಖೆ ಪರೀಕ್ಷೆಯನ್ನು ತೆಗೆದುಕೊಳ್ಳದಂತೆ ಡಿಬಾರ್‌ಮೆಂಟ್ ದಂಡವನ್ನು ವಿಧಿಸುವ ಮೆಮೊರಾಂಡಮ್ ಅನ್ನು ಹೊರಡಿಸಿದರು ಎಂದು ತಿಳಿಸಿದ್ದಾರೆ.

ಚುಗ್ ಅವರು ದೆಹಲಿ ವಿಶ್ವವಿದ್ಯಾಲಯದ ಪ್ರಾಮಾಣಿಕ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾರೆ. ಡಿಬಾರ್ ಮಾಡುವ ಮೂಲಕ ಅವರ ಶಿಕ್ಷಣ ಮತ್ತು ವೃತ್ತಿಪರ ಅವಕಾಶಗಳನ್ನು ಕಸಿದುಕೊಳ್ಳುವ ಸಾಧ್ಯತೆಯಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 10ರ ಡಿಬಾರ್ ಪತ್ರವನ್ನು ರದ್ದುಗೊಳಿಸುವುದು, ಫೆಬ್ರವರಿ 16ರ ಶೋಕಾಸ್ ನೋಟಿಸ್ ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ತಿಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...