Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...