Homeಕರ್ನಾಟಕಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

ಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

- Advertisement -
- Advertisement -

ಬೆಂಗಳೂರಿನ ರಸ್ತೆ ಗುಂಡಿ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ತ್ರೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿದೆ.

ರಸ್ತೆ ಗುಂಡಿಗಳ ಸಮಸ್ಯೆಗೆ ಸಂಬಂಧಿಸಿದಂತೆ ವಿಜಯ್ ಮೆನನ್ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಬೆಂಗಳೂರಿನ ಗುಂಡಿಗಳಿಂದ ಕೂಡಿದ ರಸ್ತೆಗಳಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಗುಂಡಿಗಳನ್ನು ತುಂಬಲು ಬಿಬಿಎಂಪಿ ಸೂಕ್ತ ತಂತ್ರಜ್ಞಾನವನ್ನು ಬಳಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

ರಸ್ತೆ ಗುಂಡಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿಭಾಗೀಯ ಪೀಠವು ಗುಂಡಿ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಮತ್ತು ಎಷ್ಟು ಗುಂಡಿಗಳನ್ನು ತುಂಬಲಾಗಿದೆ ಎಂಬುದರ ಕುರಿತು ವಿವರವಾದ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿದೆ.

ಬಿಬಿಎಂಪಿ ಪರ ವಾದ ಮಂಡಿಸಿದ ವಕೀಲರು ಮಧ್ಯಪ್ರವೇಶಿಸಿ, ಬೆಂಗಳೂರಿನಲ್ಲಿ ಗುಂಡಿಗಳನ್ನು ತುಂಬುವ ಕುರಿತು ಕ್ರಮ ಕೈಗೊಂಡಿರುವ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ಈ ವಿಷಯದ ಬಗ್ಗೆ ವಾದ ಮಾಡಲು ಸಮಯಾವಕಾಶವನ್ನೂ ವಕೀಲರು ಕೋರಿದ್ದು, ವಿಚಾರಣೆಗೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.

ಈ ಹಿಂದೆ ಸೆಪ್ಟೆಂಬರ್ 19 ರಂದು, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಬಿಬಿಎಂಪಿಯಿಂದ ಗುರುತಿಸಲಾದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಸರಿಪಡಿಸಲು ಅಥವಾ ಭರ್ತಿ ಮಾಡಲು ಬಿಬಿಎಂಪಿಗೆ 10 ದಿನಗಳ ಗಡುವು ನೀಡಿತ್ತು.

ಇದನ್ನೂ ಓದಿ: ಬಿಬಿಎಂಪಿ: ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್‌ ಗಡುವು

ಅರ್ಜಿದಾರ ವಿಜಯ್ ಮೆನನ್ ಅವರು 2015ರಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಮತ್ತು ಮಳೆನೀರು ಚರಂಡಿಗಳ ಅತಿಕ್ರಮಣಗಳನ್ನು ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೋರಿ ಪೀಠವು ಹೇಳಿತ್ತು. ಮುಂದಿನ ವಿಚಾರಣೆಗೆ ಮುನ್ನ ಛಾಯಾಚಿತ್ರಗಳ ಸಹಿತ ಗುಂಡಿಗಳನ್ನು ತುಂಬಿರುವ ಬಗ್ಗೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಪೀಠವು ಬಿಬಿಎಂಪಿಗೆ ಆದೇಶಿಸಿದೆ.

“ಬಿಬಿಎಂಪಿ ಶಾಸನಬದ್ಧ ಸಂಸ್ಥೆಯಾಗಿದ್ದು, ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಹೊಂಡಗಳಿಲ್ಲದ ರಸ್ತೆಗಳನ್ನು ಹೊಂದಲು ನಾಗರಿಕರಿಗೆ ಹಕ್ಕಿದೆ” ಎಂದು ಪೀಠವು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...