Homeಕರೋನಾ ತಲ್ಲಣಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಗೆ ಬರುವ ಸರ್ಕಾರಿ ಗುತ್ತಿಗೆ ಜಮೀನುಗಳನ್ನು ಮಾರಾಟ ಮಾಡಲು ರಾಜ್ಯಸರ್ಕಾರ ಮುಂದಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

ಬಿಬಿಎಂಪಿ, ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳನ್ನು ಮಾರಲಾಗುತ್ತಿದೆ. ಕೇವಲ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 4,780 ಆಸ್ತಿಗಳನ್ನು ಗುತ್ತಿಗೆಗೆ ನೀಡಲಾಗಿದೆ. ಇವುಗಳ ಮಾರಾಟದಿಂದ ಸುಮಾರು 5 ಸಾವಿರ ಕೋಟಿ ವರಮಾನ ಬರಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಸರ್ಕಾರದ ಈ ನಡೆಗೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಆಕ್ರೋಷ ವ್ಯಕ್ತವಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸರ್ಕಾರದ ಈ ನಡೆಯನ್ನು ಖಂಡಿಸಿದ್ದಾರೆ.

‘ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದಿದ್ದಾರೆ.

‘ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.

‘ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿ’ ಎಂದು ಆಗ್ರಹಿಸಿದ್ದಾರೆ.

ಕೊರೊನಾ ನೆಪದಲ್ಲಿ ಇಂತಹ ಕ್ರಮ ತೆಗೆದುಕೊಳ್ಳುವು ಸರಿಯಲ್ಲ. ಮುಂದೆ ಸರ್ಕಾರಿ ಯೋಜನೆಗಳಿಗೆ ಖಾಸಗಿಯವರ ಬಳಿ ಕೈಚಾಚಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಲಾಕ್ ಟೌನ್ ನಿಂದಾಗಿ ಹತ್ತಾರು ಕೋಟಿಯ ಕಾಮಗಾರಿಗಳು ಸ್ಥಗಿತಗೊಂಡಿವೆ. ಮತ್ತೊಂದೆಡೆ ಸಾವಿರಾರು ಕೋಟಿಯ ನಿರುಪಯುಕ್ತ ಕಾಮಗಾರಿಗಳನ್ನು ಸರ್ಕಾರ ಮಾಡುತ್ತಿದೆ. ಈ ಯೋಜನೆಗಳನ್ನು ರದ್ದುಪಡಿಸಿದರೆ ಸರ್ಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣ ಇರುತ್ತಿತ್ತು’ ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.

‘ಭ್ರಷ್ಟಾಚಾರ ನಡೆಸುವ ಉದ್ದೇಶದಿಂದ ಹಾಗೂ ರಿಯಲ್ ಎಸ್ಟೇಟ್ ನವರಿಗೆ ಲಾಭ ಮಾಡಿಕೊಡಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ’ ಎಂದು ಆರೋಪಿಸಿದ್ದಾರೆ.

ಗುತ್ತಿಗೆ ಜಮೀನುಗಳನ್ನು ಮಾರುವ ಬದಲು, ಅವುಗಳ ಬಾಡಿಗೆ ಹೆಚ್ಚಿಸಿದ್ದರೆ ಸಾಕಿತ್ತು ಎಂದು ಪಾಲಿಕೆಯ ಬಿಜೆಪಿ ಸದಸ್ಯ ಬಿ.ಎಸ್ ಸತ್ಯನಾರಾಯಣ ಹೇಳಿದ್ದಾರೆ. ರಾಜ್ಯಸರ್ಕಾರವು ಕೌನ್ಸಿಲ್ ನ ಒಪ್ಪಿಗೆ ಪಡೆಯದೇ ಈ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....