Homeಕರ್ನಾಟಕಗಣೇಶ್‌ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಗಣೇಶ್‌ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

- Advertisement -
- Advertisement -

ಗಣೇಶ್‌ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ.

ಈ ಕುರಿತು ಸೆ.15ರಂದು ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದು, ಬೆಂಗಳೂರು ಪಾಲಿಕೆಯ  ಮಾನ್ಯ ಮುಖ್ಯ ಆಯುಕ್ತರ ಸುತ್ತೋಲೆಯನ್ನು ಕೂಡ ಉಲ್ಲೇಖಿಸಿದ್ದಾರೆ.

ಆದೇಶದಲ್ಲಿ ಗಣೇಶ್‌ ಚತುರ್ಥಿ ಹಬ್ಬದ ಹಿನ್ನೆಲೆ 18-09-2023ರಂದು ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟ  ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.

ಇದಲ್ಲದೆ ಈಗಾಗಲೇ ಗಣೇಶ್‌ ಚತುರ್ಥಿ ಹಿನ್ನೆಲೆ ಪಾಲಿಕೆ ವತಿಯಿಂದ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಲಾಖೆಗಳ ಅಧಿಕಾರಿಗಳೊಂದಿಗೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.

ಸ್ಯಾಂಕಿ ಕೆರೆ, ಯಡಿಯೂರು ಕೆರೆ, ಹಲಸೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಲ್ಲದೆ ಕೆಲ ವಾರ್ಡ್‌ಗಳಲ್ಲಿ ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

ಕೆರೆಗಳ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಕೆ. ಅಲ್ಲಿ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸಲಹೆ ನೀಡಲಾಗಿದೆ.

ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇದನ್ನು  ಓದಿ: ಸಿಲ್ಚಾರ್‌ನ NITಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಲಾಠೀ ಚಾರ್ಜ್‌

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...