Homeಕರ್ನಾಟಕಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು...

ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು ಇಳಿಕೆ

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜೊತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ.

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ.

“ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರ್ಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ” ಎಂದು ಶಿವಕುಮಾರ್ ಅವರು ಸದನದಲ್ಲಿ ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಪ್ರಸ್ತುತ, ಸರ್ಕಾರ ಹಿಂದಿನ ಸರ್ಕಾರ ಅಂಗಿಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ.

ಇದನ್ನೂ ಓದಿ: ಪರಿಷತ್ ಫಲಿತಾಂಶ ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರನ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...