Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ...

0
'ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ' ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...