Homeಕರ್ನಾಟಕಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

- Advertisement -
- Advertisement -

ಇಬ್ಬರು ಮುಸ್ಲಿಮ್ ಬಾಲಕಿಯರ ಮೇಲೆ ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಇಲ್ಲಿನ ಕೆಆರ್‌ಸಿ ವೃತ್ತದ ಕಟ್ಟಡವೊಂದಕ್ಕೆ ಬಾಲಕಿಯರನ್ನು ಎಳೆದೊಯ್ದು ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ಮುಸ್ಲಿಂ ವಿದ್ಯಾರ್ಥಿನಿಯರು ಶನಿವಾರಸಂತೆ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಶಾಲೆಗೆ ತೆರಳಿದ್ದರು. ಈ ವೇಳೆ ಇವರಿಬ್ಬರ ಅನ್ಯಧರ್ಮದ ಸ್ನೇಹಿತೆ ಬುರ್ಕಾವನ್ನು ಪಡೆದು ಸಂಜೆ ಹಿಂತಿರುಗಿಸುವುದಾಗಿ ತಿಳಿಸಿದ್ದಳು. ಅದರಿಂದ ಈ ಇಬ್ಬರು ಮುಸ್ಲಿಂ ಗೆಳತಿಯರಲ್ಲಿ ಒಬ್ಬಾಕೆ, ತನ್ನ ಸ್ನೇಹಿತೆಗೆ ಬುರ್ಕಾವನ್ನು ನೀಡಿದ್ದಳು. ಬರ್ಖಾ ತೆಗೆದುಕೊಂಡು ಹೋದ ಬಾಲಕಿ ವಾಪಸ್ ಸಂಜೆಯಾದರೂ ತಂದುಕೊಟ್ಟಿರಲಿಲ್ಲ.

ಮುಸ್ಲಿಂ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ್ತಾ ಶನಿವಾರಸಂತೆ ಕೆಆರ್‌ಸಿ ವೃತ್ತದ ಬಳಿ ನಿಂತಿದ್ದಾಗ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ಹುಡುಗನ ಮೂಲಕ ಇಲ್ಲಿಗೆ ತಂದು ಕೊಟ್ಟಿದ್ದಾಳೆ. ಈ ವೇಳೆ ಮತೀಯ ಗೂಂಡಾಗಳು ಈ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಕಾಂಪ್ಲೆಕ್ಸ್‌ಗೆ ಒಳೆದೊಯ್ದಯ ವಿಚಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅಷ್ಟರಲ್ಲಿ ವಿಷಯ ಅರಿತ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರು ಗಾಯಗೊಂಡಿದ್ದರಿಂದ ಸರ್ಕಾರಿ ಪೊಲೀಸ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಯುವಕರು ಆಸ್ಪತ್ರೆಯ ಮುಂಭಾಗ ಜಮಾಯಿಸಿ ಆರೋಪಿಗಳ ಬಂಧಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್‌ ಶಿವಮೂರ್ತಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ. ಜೊತೆಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದರ ಜೊತೆಗೆ ಟ್ವಿಟ್ಟರ್‌‌ನಲ್ಲಿ #SaveKarnatakaFromFascists #StudentsNotSafeInKarnataka ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿದ್ದು, ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಮತೀಯ ಗೂಂಡಾಗಿರಿಯಿಂದಾಗಿ ಆತಂಕ ವ್ಯಕ್ತವಾಗಿದೆ.

ಬಾಲಕಿಯರನ್ನು ಅಮಾನುಷವಾಗಿ ವಿಚಾರಣೆಗೆ ಒಳಪಡಿಸುತ್ತಿರುವ ಮತೀಯ ಗೂಂಡಾಗಿರಿಯ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಇದರ ವಿರುದ್ಧ ದನಿ ಎತ್ತಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಕ್ರಿಯೆಗೆ ಪ್ರತಿಕ್ರಿಯೆಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ ಬಳಿಕ ಮತೀಯ ಗೂಂಡಾಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇನ್ನೊಬ್ಬರ ಊಟ, ವಸ್ತ್ರ, ಆಯ್ಕೆ ಸ್ವತಂತ್ರವನ್ನು ಅನ್ಯವ್ಯಕ್ತಿ ನಿರ್ಧರಿಸುತ್ತಿರುವುದು ಆತಂಕಕಾರಿ. ಸಂವಿಧಾನ ವಿರೋಧಿಯಾಗಿರುವ ಮಾರಲ್‌ ಪೊಲೀಸಿಂಗ್‌ಗೆ ಕಡಿವಾಣ ಬೀಳಬೇಕು ಎಂಬುದು ಜನರ ಆಗ್ರಹ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮತೀಯ ಗೂಂಡಾಗಿರಿಗೆ ದಿಕ್ಕಾರವಿರಲಿ. ಈ ಗೂಂಡಾಗಿರಿಯನ್ನು ಎಸಗಿರುವ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕೋಮುಕ್ರಿಮಿಗಳ ರಾಜ್ಯಭಾರ. ರೌಡಿ ಸಮರ್ಥಕನೊಬ್ಬ ಮುಖ್ಯಮಂತ್ರಿ. ಆಜಯ್ ಕುಮಾರ್ ಬಿಷ್ಟನ ಉತ್ತರಪ್ರದೇಶವಾಗುತ್ತಿದೆ
    ಕರ್ನಾಟಕ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...