Homeಕರ್ನಾಟಕರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು...

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು…

- Advertisement -
- Advertisement -

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ತೀವ್ರ ಇಳಿಕೆಯಾಗಿದ್ದು ಈ ಕುರಿತು ಕಾರಣಗಳನ್ನು ನೀಡುವಂತೆ ಅಬಕಾರಿ ಆಯುಕ್ತರು ಎಲ್ಲಾ ಜಿಲ್ಲೆಗಳ ಜಂಟಿ ಆಯುಕ್ತರಿಗೆ ನೋಟಿಸ್‌ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಬಾರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಕರುಣಾಕರ ರೆಡ್ಡಿಯವರು ಅಬಕಾರಿ ಇಲಾಖೆಯನ್ನೇ ದೂರಿದ್ದಾರೆ. ಪ್ರತಿ ವರ್ಷ ಶೇ.6-7% ನಷ್ಟು ಬಿಯರ್‌ ಮಾರಾಟದಲ್ಲಿ ಹೆಚ್ಚಳವಾಗುತ್ತಿತ್ತು. ಆದರೆ ಆಗ ಬಾರ್‌ ಮಾಲೀಕರ ಬೇಡಿಕೆಗನುಗುಣವಾಗಿ ಅಬಕಾರಿ ಇಲಾಖೆಯು ಪೂರೈಕೆ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಅರ್ಧದಷ್ಟು ಮಾತ್ರ ಬಿಯರ್‌ ಪೂರೈಕೆ ಮಾಡುತ್ತಿದ್ದರು. ಸ್ಟಾಕ್‌ ಇದ್ದರೂ ಕೂಡ ಐಎಂಎಲ್‌ (ವೈನ್‌, ಬ್ರಾಂದಿ ಮತ್ತು ವಿಸ್ಕಿ) ಮದ್ಯ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಲೆಂಬ ಕಾರಣದಿಂದ ಬಿಯರ್‌ ಪೂರೈಕೆ ಮಾಡುತ್ತಿರಲಿಲ್ಲ. ಹಾಗಾಗಿ ಜನ ಬಿಯರ್‌ ಸಿಗುತ್ತಿಲ್ಲ ಎಂದು ಭಾವಿಸಿದ್ದರಿಂದ ಮಾರಾಟದಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ.

ನಾವು ಮುಖ್ಯಮಂತ್ರಿಯಾದಿಗಾಗಿ ಎಲ್ಲಾ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಹ ಪ್ರಯೋಜನವಾಗಿರಲಿಲ್ಲ. ಐಎಂಎಲ್‌ ಮದ್ಯದ ಹೆಚ್ಚಿನ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಭಾರೀ ಒತ್ತಡ ಇತ್ತು. ಆದರೆ ಹಲವು ಯುವಜನ ಮತ್ತು ಮಹಿಳೆಯರು ಐಎಂಎಲ್‌ ಬದಲಿಗೆ ಬಿಯರ್‌ ಅನ್ನೇ ಇಷ್ಟಪಡುತ್ತಾರೆ. ಆದರೆ ಅಬಕಾರಿ ಇಲಾಖೆಯು ಅದಕ್ಕೆ ವಿರುದ್ಧವಾಗಿ ವರ್ತಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಕುಸಿತ ಕಾರಣವೇ?

ದೇಶಾದ್ಯಂತ ಆವರಿಸಿರುವ ಆರ್ಥಿಕ ಕುಸಿತ ಎಲ್ಲಾ ಕ್ಷೇತ್ರಗಳ ಮೇಲೂ ಪ್ರಭಾವ ಬೀರುತ್ತಿದೆ. ಮುಖ್ಯವಾಗಿ ಆರ್ಥಿಕ ಕುಸಿತದಿಂದ ಬಹಳಷ್ಟು ಯುವಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹಾಗಾಗಿ ಜನಸಾಮಾನ್ಯರು ಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಅದು ಬಿಯರ್‌ ಮಾರಾಟದ ಮೇಲೆಯೂ ಬಿದ್ದಿರಬಹುದು ಎಂಬ ಸಂಶಯ ಸಹ ಇದೆ.

ಬಿಯರ್‌ ಮತ್ತು ಐಎಂಎಲ್‌ ಮದ್ಯದ ನಡುವೆ ಏನು ವ್ಯತ್ಯಾಸ?

ಬಿಯರ್‌‌ನಲ್ಲಿ ಆಲ್ಕೋಹಾಲಿಕ್ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿರುತ್ತದೆ. ಶೇ.4-6% ಮಾತ್ರ ಆಲ್ಕೋ ಹಾಲಿಕ್‌ ಬಿಯರ್‌ನಲ್ಲಿದ್ದರು ವಿಸ್ಕಿಯಲ್ಲಿ ಅದರು ಶೇ.40% ರಷ್ಟಿರುತ್ತದೆ. ಬೆಲೆಯಲ್ಲಿಯೂ ಸಹ ಬಿಯರ್‌ಗಿಂತ ಉಳಿದ ಮದ್ಯದ ಬೆಲೆ ಹೆಚ್ಚಿರುತ್ತದೆ.

ರಾಜ್ಯ ಸರ್ಕಾರದಿಂದ ಟಾರ್ಗೆಟ್‌:

ಈ ವರ್ಷದ ಬಜೆಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ ರಾಜಸ್ವ ಸಂಗ್ರಹಣೆ ಗುರಿ ಎಂದು ಘೋಷಿಸಿದ್ದರು. ಹಾಗಾಗಿ ಅಬಕಾರಿ ಇಲಾಖೆಯು ಪ್ರತಿ ತಿಂಗಳು, ಪ್ರತಿ ವರ್ಷವೂ ಸಹ ಎಲ್ಲಾ ಮದ್ಯ ಮಾರಾಟ ಮಳಿಗೆಗಳಿಗೆ ಇಂತಿಷ್ಟು ಮದ್ಯ ಮಾರಟ ಮಾಡಲೇಬೇಕೆಂಬ ಟಾರ್ಗೆಟ್‌ ಕೊಡಲಾಗುತ್ತದೆ. ಟಾರ್ಗೆಟ್‌ ಪೂರೈಸಲು ಸತತವಾಗಿ ವಿಫಲವಾದರೆ ಆ ಬಾರ್‌ಗಳ ಲೈಸೈನ್ಸ್‌ ರದ್ದು ಮಾಡುತ್ತೇವೆ ಎಂಬ ಎಚ್ಚರಿಕೆ ಸಹ ನೀಡಲಾಗುತ್ತಿದೆ.

ಹಾಗಾಗಿ ಬಾರ್‌ನ ಮಾಲೀಕರು ಅಕ್ರಮವಾಗಿ ಲೈಸೈನ್ಸ್‌ ಇಲ್ಲದ ಪ್ರತಿ ಊರಿನ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳಿಗೂ ಸರಬರಾಜು ಮಾಡುವ ಮೂಲಕ ಟಾರ್ಗೆಟ್‌ ಪೂರೈಸುತ್ತಿದ್ದಾರೆ. ಅಲ್ಲಿಗೆ ಅಕ್ರಮ ಮದ್ಯ ಮಾರಾಟಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಒಂದು ಕಡೆ ಲಕ್ಷಾಂತರ ಮಹಿಳೆಯರು ಮದ್ಯದಿಂದಾಗಿ ತಮ್ಮ ಕುಟುಂಬವೇ ಸರ್ವನಾಶವಾಗಿದೆ, ಮದ್ಯ ನಿಷೇಧಿಸಿ ಎಂದು ಸತತವಾಗಿ ಹೋರಾಡುತ್ತಿದ್ದರೆ ಸರ್ಕಾರಗಳು ಮಾತ್ರ ಮದ್ಯ ಮಾರಾಟವನ್ನು ಹೆಚ್ಚಿಸುತ್ತಲೇ ಇವೆ. ಹಾಗಾಗಿಯೇ ಬಿಯರ್‌ ಮಾರಾಟ ಇಳಿಕೆಯಾದ ತಕ್ಷಣ ಅಬಕಾರಿ ಇಲಾಖೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಮದ್ಯ ನಿಷೇಧ ಆಂದೋಲನದ ಹಕ್ಕೊತ್ತಾಯಗಳು

ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಹಲವು ಬಾರಿ ಪ್ರತಿಭಟನೆ ನಡೆಸಿರುವ ಮಹಿಳೆಯರು ಯಡಿಯೂರಪ್ಪನವರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಕಾದು ಕುಳಿತರೆ ಸರ್ಕಾರ ಮದ್ಯ ಮಾರಾಟವನ್ನು ಹೆಚ್ಚಿಸಲು ಹೊರಟಿರುವುದು ದುರಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...