Homeಮುಖಪುಟಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

- Advertisement -
- Advertisement -

ಬಿಜೆಪಿಗೆ ಸೇರಲು ಅಥವಾ ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ.

ದಿ ವೈರ್‌ ಪ್ರಕಟಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಸಾಕೇತ್ ಗೋಖಲೆ ನಡುವಿನ ಸಂಭಾಷಣೆಯಲ್ಲಿ ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ್ಟಗಳ ಬಗ್ಗೆ ಸಾಕೇತ್ ಗೋಖಲೆ ವಿವರಿಸಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅಡಳಿತದಲ್ಲಿ ವಿಪಕ್ಷಗಳ ನಾಯಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ನೀನು ಆಡಳಿತ ಪಕ್ಷದೊಂದಿಗೆ ಸೇರು. ಮೂರು ದಿನಗಳಲ್ಲಿ ಜಾಮೀನು ಸಿಗಲಿದೆ, ಹಣವೂ ದೊರೆಯಲಿದೆ. ನಿನ್ನನ್ನು ಪಕ್ಷದ ರಾಷ್ಟ್ರೀಯ ವಕ್ತಾರನನ್ನಾಗಿ ಮಾಡಲಿದ್ದಾರೆ ಎಂದು ಸ್ವತಃ ಗುಜರಾತ್ ಪೊಲೀಸರೇ ಓರ್ವ ವಕೀಲನೊಂದಿಗೆ ಆಗಮಿಸಿ ನನಗೆ ಜೈಲಿನಲ್ಲಿ ಒತ್ತಡ ಹೇರುತ್ತಿದ್ದರು. ನಾನು ನಿರಾಕರಿಸಿದಾಗ ಹೊಡೆದು ಚಿತ್ರಹಿಂಸೆ ನೀಡಿದ್ದರು. ಇದು ನನ್ನೊಬ್ಬನ ಕುರಿತಾದುದ್ದಲ್ಲ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

“ಇಂತಹ ಹಿಂಸೆಗಳು ನನಗೆ ಮಾತ್ರವಲ್ಲ ಅಥವಾ ನಾನೊಂದು ನಿದರ್ಶನವೂ ಅಲ್ಲ. ಇದು ಭಾರತೀಯ ರಾಜಕೀಯದಲ್ಲಿ ಹೆಚ್ಚುತ್ತಿರುವ ಸರ್ವಾಧಿಕಾರಿದ ಲಕ್ಷಣವನ್ನು ಎತ್ತಿ ತೋರಿಸುತ್ತವೆ” ಎಂದಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಕ್ತಿಗಳನ್ನು ಬಳಸಿಕೊಂಡು ಮೋದಿ ಮತ್ತು ಬಿಜೆಪಿ ಪ್ರತಿಪಕ್ಷಗಳಿಗೆ ಎಷ್ಟರಮಟ್ಟಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬುವುದನ್ನು ಭಾರತದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿಯವರ ದಾಳಿಗೆ ಒಳಗಾದ ನಮ್ಮ ಪ್ರಜಾಪ್ರಭುತ್ವಕ್ಕಾಗಿ ನಾವು ಈಗಲೇ ಎದ್ದು ನಿಲ್ಲದಿದ್ದರೆ ನಮ್ಮ ಮತ್ತು ಟಿನ್‌ಪಾಟ್ ಸರ್ವಾಧಿಕಾರದ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಕ್ರೌಡ್ ಫಂಡ್ ಮಾಡಿದ ಹಣವನ್ನು ವೈಯಕ್ತಿಕ ಬಳಕೆಗಾಗಿ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಸಾಕೇತ್ ಗೋಖಲೆ ಅವರನ್ನು ಬಂಧಿಸಿ, ಜೈಲಿನಲ್ಲಿರಿಸಲಾಗಿತ್ತು.

ಇದನ್ನೂ ಓದಿ : ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...