Homeಮುಖಪುಟ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ...

₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

300 ರೂ.ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ 11 ರಿಂದ 13 ವರ್ಷ ವಯಸ್ಸಿನ ನಾಲ್ಕು ದಲಿತ ಬಾಲಕರನ್ನು 4 ಕಿ.ಮೀ.ಗಳಷ್ಟು ದೂರ ಬೆನ್ನ ಹಿಂದೆ ಕೈಗಳನ್ನು ಕಟ್ಟಿ ಮೆರವಣಿಗೆ ನಡೆಸಿದ ಅಘಾತಕಾರಿ ಘಟನೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಬನ್‌ಭೋರಿ ಗ್ರಾಮದಲ್ಲಿ ನಡೆದಿದೆ. ಭಾಸೌರ್ ಗ್ರಾಮದ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರು ಬಾಲಕರಿಗೆ ಈ ಶಿಕ್ಷೆ ವಿಧಿಸಿದ್ದು, ಮಾತ್ರವಲ್ಲದೆ ಅವರ ಕುಟುಂಬಗಳಿಗೆ ₹ 5,000 ದಂಡ ವಿಧಿಸಿದ್ದಾರೆ.

ಘಟನೆಯು ಮಾರ್ಚ್ 7 ರಂದು ನಡೆದರೂ, ಭಾನುವಾರ ಬಾಲಕರ ಕುಟುಂಬ ಸದಸ್ಯರು ಸಂಗ್ರೂರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಎಸ್‌ಪಿ) ದೂರು ಸಲ್ಲಿಸಿ, ‘ಮಕ್ಕಳ ಹಕ್ಕುಗಳ ರಕ್ಷಣೆ’ ರಾಜ್ಯ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕುಟುಂಬಿಕರು ಸಲ್ಲಿಸಿದ ದೂರಿನ ಪ್ರಕಾರ, ಭಾಸೌರ್ ಗ್ರಾಮದ ಹುಡುಗರು ಬನ್ಭೋರಿ ಗ್ರಾಮಕ್ಕೆ ತೆರಳಿ, ಹೊಲವೊಂದರಲ್ಲಿರುವ ಸಮಾಧಿಯಿಂದ 300 ರೂ.ಗಳನ್ನು ಕದ್ದಿದ್ದಾರೆ. ಗ್ರಾಮದ ನಿವಾಸಿಗಳು ಅವರನ್ನು ಹಿಡಿದು ಭಾಸೌರ್‌ನ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರನ್ನು ಕರೆದು ಹುಡುಗರನ್ನು ಹಸ್ತಾಂತರಿಸಿದ್ದಾರೆ. ಗ್ರಾಮದ ಸರ್ಪಂಚ್ ಮತ್ತು ಇತರರು ಬಾಲಕರ ಕೈಗಳನ್ನು ಬೆನ್ನ ಹಿಂದೆ ಕಟ್ಟಿ, ಅವರನ್ನು ತಮ್ಮ ಬೈಕ್‌ಗಳ ಮುಂದಿನಿಂದ ನಡೆಯುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಬಾಲಕರು ದಲಿತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಬಾಲಕನೊಬ್ಬನ ತಂದೆ ಗುರ್ಮೀತ್ ಸಿಂಗ್ ಹೇಳುವಂತೆ, “ಅವರು ಹಲ್ಲೆ ನಡೆಸಿರುವ ಕಾರಣ ಬಾಲಕನೊಬ್ಬನ ಮಣಿಕಟ್ಟಿನ ಮೇಲೆ ಮುರಿತ ಉಂಟಾಗಿದೆ. ಈ ಬಗ್ಗೆ ನಾನು ಪೊಲೀಸ್ ಮತ್ತು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದೇನೆ. ದುಷ್ಕರ್ಮಿಗಳಿಗೆ ಶಿಕ್ಷೆಯಾಗುವ ಮೂಲಕ ನಮಗೆ ನ್ಯಾಯ ಸಿಗಬೇಕು” ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬಾಲಕರು ಕಳ್ಳತನದಲ್ಲಿ ತೊಡಗಿದ್ದರು, ಇದಕ್ಕಾಗಿ ಪಂಚಾಯತ್ ಅವರಿಗೆ ಪಾಠ ಕಲಿಸಲು ಬಯಸಿತ್ತು ಎಂದು ಆರೋಪಿ ಸರ್ಪಂಚ್ ಗುರ್ನಮ್ ಸಿಂಗ್ ಹೇಳಿದ್ದಾನೆ. “ನಾವು ಬನ್ಭೋರಿ ಗ್ರಾಮವನ್ನು ತಲುಪಿದಾಗಲೇ, ಅವರ ಕೈಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ನಾವು ಅವರನ್ನು ನಡೆಯಲು ಕೇಳಿದೆವು, ಈ ಮೂಲಕ ಅವರಿಗೆ ಪಾಠ ಕಲಿಸಲು ಶಿಕ್ಷೆ ನೀಡಿದೆವು. ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ” ಎಂದು ಸರ್ಪಂಚ್ ಹೇಳಿದ್ದಾನೆ.

ಸರ್ಪಂಚ್ ಗುರ್ನಮ್ ಸಿಂಗ್ ಸೇರಿದಂತೆ ನಾಲ್ವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಧುರಿ ಸದರ್ ಪೊಲೀಸ್ ಠಾಣೆ ಉಸ್ತುವಾರಿ ದೀಪಿಂದರ್ಪಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...