ಭಾರತ ಎ ತಂಡದಿಂದ ಸರ್ಫರಾಝ್ ಖಾನ್ ಅವರನ್ನು ಹೊರಗಿಟ್ಟಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆದಾರ ಅಜಿತ್ ಅಗರ್ಕರ್ ವಿರುದ್ದ ಜನರು ಧಾರ್ಮಿಕ ಪಕ್ಷಪಾತದ ಆರೋಪ ಮಾಡಿದ್ದಾರೆ.
ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಭಾರತ ಎ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ್ ಧಾರ್ಮಿಕ ಪಕ್ಷಪಾತ ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಪರೋಕ್ಷವಾಗಿ ಆರೋಪಿಸಿದ್ದಾರೆ.
ಭಾರತ ಎ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಇದರಲ್ಲಿ ಸರ್ಫರಾಝ್ ಖಾನ್‌ರನ್ನು ಕೈಬಿಡುವ ಮೂಲಕ ಬಿಸಿಸಿಐ ಟೀಕೆಗೆ ಗುರಿಯಾಗಿದೆ. ಈ ನಿರ್ಧಾರವು ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರನೊಬ್ಬನಿಗೆ ಮಾಡಿರುವ ಅನ್ಯಾಯ ಎಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಬಿಸಿಸಿಐ ನಿರ್ಧಾರವು ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಝ್ ಖಾನ್ ಎರಡನೇ ಶ್ರೇಣಿಯ ತಂಡದಲ್ಲಿ ಸ್ಥಾನಕ್ಕಾಗಿ ಪರಿಗಣನೆಯಲ್ಲಿಯೇ ಇದ್ದಾರೆಯೇ ಎಂಬ ಸಂಶಯವನ್ನು ಹುಟ್ಟುಹಾಕಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಸರ್ಫರಾಝ್ ಅವರನ್ನು ಉಪನಾಮದ ಕಾರಣಕ್ಕೆ ಕೈ ಬಿಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. “ಈ ವಿಷಯದಲ್ಲಿ ಗೌತಮ್ ಗಂಭೀರ್ ಅವರ ನಿಲುವು ನಮಗೆ ತಿಳಿದಿದೆ” ಎಂದಿದ್ದಾರೆ.
Is Sarfaraz Khan not selected because of his surname ! #justasking . We know where Gautam Gambhir stands on that matter
— Dr. Shama Mohamed (@drshamamohd) October 22, 2025
“ಅಗರ್ಕರ್ ಮತ್ತು ಗಂಭೀರ್ ಅವರಿಂದ ಮತ್ತೊಂದು ವೃತ್ತಿಜೀವನ ನಾಶವಾಯಿತು” ಎಂದು ಮತ್ತೊಬ್ಬರು ಎಕ್ಸ್ ಬಳಕೆದಾರರು ಬರೆದುಕೊಂಡಿದ್ದಾರೆ.
ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಸರ್ಫರಾಝ್ ಅವರನ್ನು ಭಾರತ ಎ ತಂಡಕ್ಕೆ ಏಕೆ ಆಯ್ಕೆ ಮಾಡಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಸರ್ಫರಾಝ್ ಕೊನೆಯ ಬಾರಿಗೆ ರಾಷ್ಟ್ರೀಯ ತಂಡದಲ್ಲಿ 2024 ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಡಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ.
ದೈಹಿಕ ಬದಲಾವಣೆಗಳನ್ನು ಮಾಡಿಕೊಂಡಿದ್ದರೂ, ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಕಡೆಗಣಿಸಲಾಗಿತ್ತು. ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗೆ ಪರಿಗಣಿಸಿರಲಿಲ್ಲ.
ಮುಂಬರುವ ಸರಣಿಗೆ ಭಾರತ ಎ ತಂಡದಲ್ಲಿ ಸರ್ಫರಾಝ್ ಹೆಸರು ಇಲ್ಲದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿಯೇ ಆಶ್ಚರ್ಯ ಉಂಟು ಮಾಡಿದೆ.
ಬೇಸಿಗೆಯಲ್ಲಿ, ಸರ್ಫರಾಝ್ ಖಾನ್ 17 ಕೆ.ಜಿ ತೂಕ ಕಳೆದುಕೊಂಡು ಹೆಚ್ಚು ತೆಳ್ಳಗಾಗಿದ್ದಾರೆ ಮತ್ತು ತಾನೆಂದೂ ಇರದಷ್ಟು ಫಿಟ್ ಆಗಿದ್ದಾರೆ.
ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡು ಪ್ರಥಮ ದರ್ಜೆ ಪಂದ್ಯಗಳಿಗೆ 15 ಜನರ ಭಾರತ ಎ ತಂಡವನ್ನು ಹೆಸರಿಸಿದೆ.
ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಫಸ್ಟ್ ಕ್ಲಾಸ್ ಪಂದ್ಯಗಳಿಗಾಗಿ 15 ಸದಸ್ಯರ ಭಾರತ ಎ ತಂಡವನ್ನು ಪ್ರಕಟಿಸಿದೆ.
ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು


