Homeಮುಖಪುಟ'ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?'..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

- Advertisement -
- Advertisement -

ಭಾರತ ಎ ತಂಡದಿಂದ ಸರ್ಫರಾಝ್ ಖಾನ್ ಅವರನ್ನು ಹೊರಗಿಟ್ಟಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆದಾರ ಅಜಿತ್ ಅಗರ್ಕರ್ ವಿರುದ್ದ ಜನರು ಧಾರ್ಮಿಕ ಪಕ್ಷಪಾತದ ಆರೋಪ ಮಾಡಿದ್ದಾರೆ.

ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಭಾರತ ಎ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ್ ಧಾರ್ಮಿಕ ಪಕ್ಷಪಾತ ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಪರೋಕ್ಷವಾಗಿ ಆರೋಪಿಸಿದ್ದಾರೆ.

ಭಾರತ ಎ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಇದರಲ್ಲಿ ಸರ್ಫರಾಝ್ ಖಾನ್‌ರನ್ನು ಕೈಬಿಡುವ ಮೂಲಕ ಬಿಸಿಸಿಐ ಟೀಕೆಗೆ ಗುರಿಯಾಗಿದೆ. ಈ ನಿರ್ಧಾರವು ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರನೊಬ್ಬನಿಗೆ ಮಾಡಿರುವ ಅನ್ಯಾಯ ಎಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಬಿಸಿಸಿಐ ನಿರ್ಧಾರವು ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಝ್ ಖಾನ್ ಎರಡನೇ ಶ್ರೇಣಿಯ ತಂಡದಲ್ಲಿ ಸ್ಥಾನಕ್ಕಾಗಿ ಪರಿಗಣನೆಯಲ್ಲಿಯೇ ಇದ್ದಾರೆಯೇ ಎಂಬ ಸಂಶಯವನ್ನು ಹುಟ್ಟುಹಾಕಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಸರ್ಫರಾಝ್ ಅವರನ್ನು ಉಪನಾಮದ ಕಾರಣಕ್ಕೆ ಕೈ ಬಿಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. “ಈ ವಿಷಯದಲ್ಲಿ ಗೌತಮ್ ಗಂಭೀರ್ ಅವರ ನಿಲುವು ನಮಗೆ ತಿಳಿದಿದೆ” ಎಂದಿದ್ದಾರೆ.

“ಅಗರ್ಕರ್ ಮತ್ತು ಗಂಭೀರ್ ಅವರಿಂದ ಮತ್ತೊಂದು ವೃತ್ತಿಜೀವನ ನಾಶವಾಯಿತು” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬರೆದುಕೊಂಡಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಸರ್ಫರಾಝ್ ಅವರನ್ನು ಭಾರತ ಎ ತಂಡಕ್ಕೆ ಏಕೆ ಆಯ್ಕೆ ಮಾಡಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಸರ್ಫರಾಝ್ ಕೊನೆಯ ಬಾರಿಗೆ ರಾಷ್ಟ್ರೀಯ ತಂಡದಲ್ಲಿ 2024 ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಡಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ದೈಹಿಕ ಬದಲಾವಣೆಗಳನ್ನು ಮಾಡಿಕೊಂಡಿದ್ದರೂ, ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಕಡೆಗಣಿಸಲಾಗಿತ್ತು. ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗೆ ಪರಿಗಣಿಸಿರಲಿಲ್ಲ.

ಮುಂಬರುವ ಸರಣಿಗೆ ಭಾರತ ಎ ತಂಡದಲ್ಲಿ ಸರ್ಫರಾಝ್ ಹೆಸರು ಇಲ್ಲದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿಯೇ ಆಶ್ಚರ್ಯ ಉಂಟು ಮಾಡಿದೆ.

ಬೇಸಿಗೆಯಲ್ಲಿ, ಸರ್ಫರಾಝ್ ಖಾನ್ 17 ಕೆ.ಜಿ ತೂಕ ಕಳೆದುಕೊಂಡು ಹೆಚ್ಚು ತೆಳ್ಳಗಾಗಿದ್ದಾರೆ ಮತ್ತು ತಾನೆಂದೂ ಇರದಷ್ಟು ಫಿಟ್ ಆಗಿದ್ದಾರೆ.

ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡು ಪ್ರಥಮ ದರ್ಜೆ ಪಂದ್ಯಗಳಿಗೆ 15 ಜನರ ಭಾರತ ಎ ತಂಡವನ್ನು ಹೆಸರಿಸಿದೆ.

ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಫಸ್ಟ್ ಕ್ಲಾಸ್ ಪಂದ್ಯಗಳಿಗಾಗಿ 15 ಸದಸ್ಯರ ಭಾರತ ಎ ತಂಡವನ್ನು ಪ್ರಕಟಿಸಿದೆ.

ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...