Homeಕರ್ನಾಟಕಬೇಡ ಜಂಗಮ vs ಲಿಂಗಾಯತ ಜಂಗಮ | ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಕೆ.ಎಚ್. ​​ಮುನಿಯಪ್ಪ

ಬೇಡ ಜಂಗಮ vs ಲಿಂಗಾಯತ ಜಂಗಮ | ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಕೆ.ಎಚ್. ​​ಮುನಿಯಪ್ಪ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯ ಸಮಯದಲ್ಲಿ ‘ಸ್ಪರ್ಶ’ ಸಮುದಾಯವಾದ ಲಿಂಗಾಯತ ಜಂಗಮರನ್ನು ‘ಅಸ್ಪೃಶ್ಯ’ ಬೇಡ ಅಥವಾ ಬುಡ್ಗ ಜಂಗಮ ಎಂದು ಪರಿಗಣಿಸದಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ​​ಮುನಿಯಪ್ಪ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಳ ಮೀಸಲಾತಿ ಒದಗಿಸಲು ಪ್ರಾಯೋಗಿಕ ದತ್ತಾಂಶವನ್ನು ಸಂಗ್ರಹಿಸಲು ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯುತ್ತಿದ್ದು, ಈ ವೇಳೆ ಸಚವ ಮುನಿಯಪ್ಪ ಅವರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಬೇಡ ಜಂಗಮ vs ಲಿಂಗಾಯತ ಜಂಗಮ

ಈ ಬಗ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಲ್ಕು ಪುಟಗಳ ಪತ್ರ ಪತ್ರ ಬರೆದಿದ್ದು, ಬೇಡ ಅಥವಾ ಬುಡ್ಗ ಜಂಗಮ ಎಂಬ ನಾಮಕರಣಗಳನ್ನು ಬಳಸಿಕೊಂಡು ತಮ್ಮನ್ನು ಪರಿಶಿಷ್ಟ ಜಾತಿಗಳೆಂದು ಗುರುತಿಸಿಕೊಳ್ಳುವ ಜನರನ್ನು ಎಣಿಸುವಾಗ ಸರ್ವೇಯರ್‌ಗಳು ವಿವೇಚನೆಯನ್ನು ಬಳಸಬೇಕು ಎಂದು ಮುನಿಯಪ್ಪ ಹೇಳಿದ್ದಾರೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ತೆಲುಗು ಮಾತನಾಡುವ ಬೇಡ-ಬುಡ್ಗ ಜಂಗಮರು ವಲಸೆ ಬಂದಿದ್ದಾರೆ ಎಂದು ಸ್ವತಃ ಎಸ್‌ಸಿ ಸಮುದಾಯದ ವ್ಯಕ್ತಿಯಾಗಿರುವ ಆಗಿರುವ ಮುನಿಯಪ್ಪ ಅವರು ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಈ ಸಮುದಾಯವನ್ನು ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಅಡಿಯಲ್ಲಿ ವರ್ಗೀಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ, ಬೇಡ-ಬುಡ್ಗ ಜಂಗಮರು ಹೊಲೆಯ ಮತ್ತು ಮಾದಿಗ ಸಮುದಾಯಗಳಿಗೆ ಅರ್ಚಕರು. ಮಾಳ ಜಂಗಮ ಸಮುದಾಯದ ಮಠಾಧೀಶರು ಅವರನ್ನು ಪೌರೋಹಿತ್ಯಕ್ಕೆ ದೀಕ್ಷೆ ನೀಡುತ್ತಾರೆ. ಅವರು ಭಿಕ್ಷೆ ಬೇಡುವುದು ಮತ್ತು ಭವಿಷ್ಯ ಹೇಳುವ ಮೂಲಕ ಜೀವನ ಸಾಗಿಸುತ್ತಾರೆ” ಎಂದು ಮುನಿಯಪ್ಪ ಹೇಳಿದ್ದು, ಬೇಡ-ಬುಡ್ಗ ಜಂಗಮರು ಮಾಂಸಾಹಾರಿಗಳು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬೇಡ-ಬುಡ್ಗ ಜಂಗಮರ ಜನಸಂಖ್ಯೆಯಲ್ಲಿನ “ಅಸ್ವಾಭಾವಿಕ” ಏರಿಕೆಯ ಬಗ್ಗೆ ಮುನಿಯಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. 1961 ರಲ್ಲಿ, ಅವರ ಜನಸಂಖ್ಯೆ 5,141 ಆಗಿತ್ತು. ಈ ಸಂಖ್ಯೆ 1991 ರಲ್ಲಿ 1.21 ಲಕ್ಷ, 2011 ರಲ್ಲಿ 1.17 ಲಕ್ಷ ಮತ್ತು 2014 ರಲ್ಲಿ 4.10 ಲಕ್ಷವಾಯಿತು. ಎಂದು ಅವರು ತಿಳಿಸಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ, ಲಿಂಗಾಯತ ಮತ್ತು ವೀರಶೈವ ಸಮುದಾಯಗಳ ‘ಸ್ಪರ್ಶ’ ಲಿಂಗಾಯತ ಜಂಗಮರು, ಪರಿಶಿಷ್ಟ ಜಾತಿಗಳ ಬೇಡ ಮತ್ತು ಬುಡ್ಗ ಜಂಗಮರು ಎಂದು ಹೇಳಿಕೊಂಡು ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದ್ದಾರೆ ಮತ್ತು ಮೀಸಲಾತಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ” ಎಂದು ಮುನಿಯಪ್ಪ ಹೇಳಿದ್ದಾರೆ.

ಬೇಡ ಮತ್ತು ಬುಡ್ಗ ಜಂಗಮರು ಕರ್ನಾಟಕದ ಲಿಂಗಾಯತ ಜಂಗಮಗಿಂತ “ಸಂಪೂರ್ಣವಾಗಿ ಭಿನ್ನರಾಗಿದ್ದಾರೆ” ಎಂದು ಮುನಿಯಪ್ಪ ಕೆಎಸ್ ಸಿಂಗ್ ಅವರ ದಿ ಶೆಡ್ಯೂಲ್ಡ್ ಕ್ಯಾಸ್ಟ್ಸ್ ಅನ್ನು ಉಲ್ಲೇಖಿಸಿ ಹೇಳಿದ್ದಾರೆ.

“ಆದ್ದರಿಂದ, ಪರಿಶಿಷ್ಟ ಜಾತಿಗಳ ಸಮೀಕ್ಷೆಯ ಸಮಯದಲ್ಲಿ ಸರ್ವೇಯರ್‌ಗಳು ಬೇಡ ಮತ್ತು ಬುಡ್ಗ ಜಂಗಮರು ಎಂದು ಹೇಳಿಕೊಳ್ಳುವವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಪರಿಶೀಲಿಸಬೇಕು” ಎಂದು ಮುನಿಯಪ್ಪ ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಸಮೀಕ್ಷೆಯು ಮೇ 5 ರಂದು ಪ್ರಾರಂಭವಾಗಿ ಮೇ 17 ರಂದು ಕೊನೆಗೊಳ್ಳಲಿದೆ. ಮನೆ-ಮನೆ ಸಮೀಕ್ಷೆಯಲ್ಲಿ ಭಾಗವಹಿಸದವರಿಗೆ ಮೇ 19-21 ರವರೆಗೆ ವಿಶೇಷ ಶಿಬಿರಗಳನ್ನು ನಡೆಸಲಾಗುವುದು. ಮೇ 19-23 ರವರೆಗೆ ಆನ್‌ಲೈನ್ ಸ್ವಯಂ ಘೋಷಣೆಗೆ ಅವಕಾಶವೂ ಇರುತ್ತದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...