Homeಕರ್ನಾಟಕಬೀದರ್: ಮಸೀದಿ ಮೇಲೆ ಕೇಸರಿ ಧ್ವಜ ಹಾರಾಟ; ನಾಲ್ವರು ಆರೋಪಿಗಳ ಬಂಧನ

ಬೀದರ್: ಮಸೀದಿ ಮೇಲೆ ಕೇಸರಿ ಧ್ವಜ ಹಾರಾಟ; ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಬೀದರ್ ಜಿಲ್ಲೆಯ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿದ್ದ ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ ರಾಜಕುಮಾರ ಸೂರ್ಯ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಬಂಧಿತ ಆರೋಪಿಗಳು.

ದುಷ್ಕರ್ಮಿಗಳು ಸೆ.21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಪರಾರಿಯಾಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಗ್ರಾಮಸ್ಥರ ಮನವೊಲಿಸಿ ಕೇಸರಿ ಧ್ವಜವನ್ನು ತೆಗೆಸಿದ್ದರು.

ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಅಶಾಂತಿಗೆ ಪ್ರಯತ್ನಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಗ್ರಾಮದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು, ಶಾಂತಿ ಕಾಪಾಡಲು ಗ್ರಾಮಸ್ಥರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮುಜಾಪ್ಪರ್‌ನಗರ ಶಾಲಾ ಪ್ರಕರಣ: ಉತ್ತರಪ್ರದೇಶದ ಆತ್ಮಸಾಕ್ಷಿಗೆ ಆಘಾತ; ಸುಪ್ರೀಂಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...