Homeಮುಖಪುಟಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -
- Advertisement -

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಗೋವಾ ರಾಜ್ಯವು ಭಾರೀ ಪ್ರಮಾಣದಲ್ಲಿ ಗೋಮಾಂಸದ ಕೊರತೆ ಅನುಭವಿಸುತ್ತಿದೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ತೀಕ್ಷ್ಣ ರೀತಿಯಲ್ಲಿ ಪ್ರತಿಕ್ರಿಯಿಸಿದೆ.

ಕರ್ನಾಟಕದ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಮಸೂದೆ- 2020 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಹಾಗಾಗಿ ಕೆಲವೆಡೆ ಗೋಮಾಂಸದ ಮಾರಾಟ ಮತ್ತು ರಫ್ತು ನಿಲ್ಲಿಸಲಾಗಿದೆ. ಇದು ಗೋವಾ ರಾಜ್ಯದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಹಬ್ಬಗಳು ಆರಂಭವಾಗಿದ್ದು ಗೋಮಾಂಸ ಅವರ ಪ್ರಮುಖ ಖಾದ್ಯವಾಗಿದೆ. ಗೋಮಾಂಸ ಮಾರಾಟಗಾರರು ಬುಧವಾರ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಆಮದು ಮಾಡಿಕೊಳ್ಳಲು ವ್ಯವಸ್ಥೆ ಮಾಡುವುದಾಗಿ ಸಿಎಂ ಪ್ರಮೋದ್ ಸಾವಂತ್ ಗೋಮಾಂಸ ಮಾರಾಟಗಾರರಿಗೆ ಭರವಸೆ ನೀಡಿದ್ದಾರೆ.

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ. ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ! ಇದಕ್ಕೆ ಬಿಜೆಪಿ ಕರ್ನಾಟಕದ
ಅಭಿಪ್ರಾಯ ಮತ್ತು ಉತ್ತರ ಏನು? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಆಳ್ವಿಕೆಯಿರುವ ಗೋವಾ ರಾಜ್ಯವು ಪ್ರತಿದಿನ ಸುಮಾರು 15-20 ಟನ್ ಗೋಮಾಂಸವನ್ನು ಬಳಸುತ್ತದೆ. ಅಲ್ಲಿ ಗೋಹತ್ಯೆ, ಗೋಮಾಂಸ ನಿಷೇಧವಿಲ್ಲ. ಆದರೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರದ ಮಾಂಸ ಸಂಕೀರ್ಣವನ್ನು ಸ್ಥಗಿತಗೊಳಿಸಿದ್ದರಿಂದ, ರಾಜ್ಯದ ಗೋಮಾಂಸ ವ್ಯಾಪಾರಿಗಳು ಮುಖ್ಯವಾಗಿ ಕರ್ನಾಟಕದಿಂದ ಮಾಂಸವನ್ನು ಆಮದು ಮಾಡಿಕೊಳ್ಳುತ್ತಾರೆ.

“ಅಂಗಡಿಗಳನ್ನು ಮುಚ್ಚಲಾಗಿದೆ. ಆದಾಯವಿಲ್ಲ. ಸಾವಿರಾರು ಕಾರ್ಮಿಕರು ಮತ್ತು ಕುಟುಂಬಗಳು ಈ ವ್ಯಾಪಾರವನ್ನು ಅವಲಂಬಿಸಿವೆ. ಇದಲ್ಲದೆ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಬೇಕರಿಗಳಿವೆ. ಈ ಋತುವಿನಲ್ಲಿ ಮತ್ತು ಹೊಸ ವರ್ಷದಲ್ಲಿ ಪ್ರವಾಸಿಗರಿಂದ ಗೋಮಾಂಸಕ್ಕೆ ಸಾಕಷ್ಟು ಬೇಡಿಕೆಯಿದೆ” ಎಂದು ಸ್ಥಳೀಯರೊಬ್ಬರ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಕರ್ನಾಟಕದ ಮಾಂಸ ವ್ಯಾಪಾರಿಗಳ ಸಂಘವು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಲು ನಾವು ಕಾಯುತ್ತಿದ್ದೇವೆ. ಗೋವಾ ಸರ್ಕಾರ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಪರಿಹರಿಸಬೇಕು. ಗೋವಾ ಗೋಮಾಂಸ ಪೂರೈಕೆಗಾಗಿ ಕರ್ನಾಟಕದ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಆದರೆ ಒಂದು ವಾರದಿಂದ ನಾವು ಕರ್ನಾಟಕದಿಂದ ಮಾಂಸ ಅಥವಾ ಜಾನುವಾರುಗಳನ್ನು ಸ್ವೀಕರಿಸಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...