Homeಕರ್ನಾಟಕಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

ಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

- Advertisement -
- Advertisement -

“ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಬೇಕು. ಅವರು ಕ್ಷಮಿಸಲಾರದ ತಪ್ಪು ಮಾಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ, ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶರಣರ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, “ಕ್ಷಮಿಸಲಾರದ ಅಕ್ಷಮ್ಯ ಅಪರಾಧವನ್ನು ಮುರುಘಾ ಶರಣರು ಮಾಡಿರುವುದು ಜಗತ್ತಿಗೆ ಗೊತ್ತಿರುವ ವಿಷಯ. ಈ ಕೆಳಮಟ್ಟಕ್ಕೆ ಅವರು ಇಳಿಯುತ್ತಾರೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು, ಅವರಿಗೆ ತಕ್ಕ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪೋಕ್ಸೋ ಪ್ರಕರಣ ಮರುಘಾ ಶರಣರ ವಿರುದ್ಧ ದಾಖಲಾದಾಗ ಬಿಜೆಪಿಯ ಕೆಲ ನಾಯಕರು, “ಶರಣರು ತಪ್ಪು ಮಾಡಿಲ್ಲ, ತನಿಖೆಯಾಗಲಿ” ಎಂದು ಹೇಳಿಕೆಗಳನ್ನು ನೀಡಿದ್ದರು. ಕಾಂಗ್ರೆಸ್ ನಾಯಕರು ಕೂಡ ಮೌನ ವಹಿಸಿದ್ದರು.

ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್‌ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.

ಪ್ರಕರಣದ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್‌ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಶಿವಮೂರ್ತಿ ಮುರುಘಾ ಶರಣರು, ಮಹಿಳಾ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ದ ಮರುಘಾ ಶರಣರು, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು, ಚಾಕಲೇಟ್ ನೀಡಿ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದರು. ಕಚೇರಿ, ಬೆಡ್ ರೂಂ, ಬಾತ್ ರೂಂಗೆ ಕರೆದೊಯ್ದು ಬಲಾತ್ಕಾರ ಮಾಡುತ್ತಿದ್ದರು. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ.

ಶರಣರ ಆಣತಿಯಂತೆ ಮಠದ ವಾರ್ಡನ್ ರಶ್ಮಿ, ಮಕ್ಕಳನ್ನು ಸ್ವಾಮೀಜಿಯ ಕೊಠಡಿಗೆ ಕಳುಹಿಸಿಕೊಡುತ್ತಿದ್ದರು. ಅಲ್ಲದೆ ಈ ವಿಚಾರ ಹೊರಗೆ ಬಾಯಿ ಬಿಡದಂತೆ ವಿದ್ಯಾರ್ಥಿನಿಯರಿಗೆ ಹೆದರಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಸಹ ಆಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರ ಪ್ರದೇಶಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ. ಮಠದ ಹಾಸ್ಟೆಲ್‌ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಮುರುಘಾ ಶರಣರ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮಾನ್ಯ ಮಾಜಿ ಮುಖ್ಯಮಂತ್ರಿಗಳಿಗೆ ಈಗ ಅರಿವಾಗಿರಬೇಕು, ತಮ್ಮ ಸ್ವಜಾತಿ ಪ್ರೇಮ ಮತ್ತು ಸ್ವಜನಪಕ್ಷಪಾತ ,ಸಾರ್ವಜನಿಕ ಬದುಕಿನಲ್ಲಿರುವ ವ್ಯಕ್ತಿಗಳು ಯಾವುದೇ ಪ್ರಕರಣದ ಪೂರ್ಣ ಮಾಹಿತಿ ಇಲ್ಲದೆ ನೀಡುವ ಪೂರ್ವಬಾವಿ ಹೇಳಿಕೆಗಳು ಎಷ್ಟು ಮುಜುಗರ ಉಂಟು ಮಾಡುತ್ತವೆ ಎಂದು, ಕನಿಷ್ಟ ಈಗಲಾದರೂ ಸರಿಯಾದ ಹೇಳಿಕೆ ನೀಡಿದ್ದಿರ.

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ...

0
ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌...