Homeಮುಖಪುಟಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ: ಅಕ್ಕಿ ಕಡಿತದ ಕುರಿತು...

ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ: ಅಕ್ಕಿ ಕಡಿತದ ಕುರಿತು ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ ಅಕ್ಕಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ ಬೆನ್ನಲ್ಲೇ, ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

“ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾವರು ‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲಾ ಯೋಜನೆಗಳನ್ನು ಕಡಿತಗೊಳಿಸಲಾಗುವುದು’ ಎಂದು ಹೇಳಿದ್ದರು. ಈಗ ಅದನ್ನೇ ಮಾಡುತ್ತಿದ್ದಾರೆ. ಇದನ್ನು ರಾಜಕೀಯ ಎಂದು ನಾನು ಈಗ ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡಲಿ. ಅದಕ್ಕೂ ಮುನ್ನ ಬಿಜೆಪಿ ನಾಯಕರು ನಡ್ಡಾ ಅವರ ಹೇಳಿಕೆ ಬಗ್ಗೆ ಉತ್ತರ ನೀಡಲಿ” ಎಂದು ಡಿಕೆಶಿ ಹೇಳಿದ್ದಾರೆ.

ನಮ್ಮ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ನರೇಂದ್ರ ಮೋದಿ
ನೇತೃತ್ವದ ಭಾರತ ಸರ್ಕಾರವು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಅಕ್ಕಿ ಮಾರಾಟವನ್ನು ನಿಲ್ಲಿಸಲು ಎಫ್‌ಸಿಐಗೆ ಪತ್ರ ಬರೆದಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತರದಿದ್ದರೆ ಎಲ್ಲಾ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿ ನಾಯಕರು ಚುನಾವಣಾ ಸಮಯದಲ್ಲಿ ಕನ್ನಡಿಗರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಎಫ್‌ಸಿಐಗೆ ಈ ಪತ್ರವು ಅದರ ಫಲಿತಾಂಶವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವು ಜೂನ್ 9, 2023 ರಂದು ರಾಜ್ಯಕ್ಕೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ ಎಂದು ಭಾರತೀಯ ಆಹಾರ ನಿಗಮದ ಉಪ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿತ್ತು. ಭಾರತೀಯ ಆಹಾರ ನಿಗಮವು ರಾಜ್ಯದ ಮನವಿಯನ್ನು ಸ್ವೀಕರಿಸಿದೆ ಮತ್ತು ಜೂನ್ 12, 2023 ರ ದಿನಾಂಕದ ಪತ್ರದಲ್ಲಿ ರೂ. 3400/- ಪ್ರತಿ ಕ್ವಿಂಟಲ್ ದರದಲ್ಲಿ ಅಕ್ಕಿ ನೀಡಲು ಒಪ್ಪಿಗೆ ನೀಡಿತ್ತು. ಆದರೆ ಜೂನ್ 13 ರಂದು ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಮಾರದಂತೆ ನಿರ್ಬಂಧ ಹೇರಿದೆ ಎಂದು ಕಿಡಿಕಾರಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...