Homeಮುಖಪುಟವಿರೋಧಿಗಳ ತಲೆ ತೆಗೆಯಿರಿ ಹೇಳಿಕೆ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ FIR

ವಿರೋಧಿಗಳ ತಲೆ ತೆಗೆಯಿರಿ ಹೇಳಿಕೆ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ FIR

- Advertisement -
- Advertisement -

ಮನೆಗಳಲ್ಲಿ ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ ಎಂದು ಕೋಮು ಪ್ರಚೋದನಾ ಭಾಷಣ ಮಾಡಿದ್ದ ಭಯೋತ್ಪಾದನಾ ಆರೋಪಿ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ ಶಿವಮೊಗ್ಗದಲ್ಲಿ FIR ದಾಖಲಾಗಿದೆ.

ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸುಂದರೇಶ್‌ರವರು ನೀಡಿದ ದೂರಿನನ್ವಯ ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 153ಬಿ, 268ಎ, 298,54, 508ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾನುವಾರ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರಾದೇಶಿಕ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಪ್ರಗ್ಯಾಸಿಂಗ್ “ಅವರು ಬಜರಂಗದಳ ಕಾರ್ಯಕರ್ತ ಹರ್ಷ ಮತ್ತು ಇತರ ಹಿಂದೂ ವೀರರು, ಬಿಜೆಪಿ ಕಾರ್ಯಕರ್ತರನ್ನು ಚಾಕುವಿನಿಂದ ಇರಿದಿದ್ದಾರೆ. ಹಾಗಾಗಿ ನಾವು (ಹಿಂದೂಗಳು) ನಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ತರಕಾರಿಗಳನ್ನು ಕತ್ತರಿಸಲು ಬಳಸುವ ಚಾಕುಗಳನ್ನು ಕನಿಷ್ಠ ಚೂಪು ಮಾಡಿಕೊಂಡು ಇಟ್ಟುಕೊಳ್ಳಿ. ಯಾವಾಗ ಉಪಯೋಗಕ್ಕೆ ಬರುತ್ತವೆ ಹೇಳಲಾಗುವುದಿಲ್ಲ. ಸಮಯ ಬಂದಾಗ ವೈರಿಗಳ ತಲೆ ತೆಗೆಯಿರಿ” ಎಂದು ಪ್ರಚೋದಿಸಿದ್ದರು.

ಲವ್ ಜಿಹಾದ್ ಮಾಡುವವರಿಗೆ ಲವ್ ಜಿಹಾದ್ ರೀತಿಯಲ್ಲಿಯೇ ಉತ್ತರ ಕೊಡಿ. ನಿಮ್ಮ ಹೆಣ್ಣು ಮಕ್ಕಳನ್ನು ಸುರಕ್ಷಿತವಾಗಿರಿಸಿಕೊಳ್ಳಿ. ಅವರಿಗೆ ಸಂಸ್ಕಾರ ಕಲಿಸಿ ಎಂದು ಪ್ರಗ್ಯಾ ಸಿಂಗ್ ಹೇಳಿದ್ದಾರೆ.

ಸೌತ್ ಫಸ್ಟ್ ಮಾಧ್ಯಮವು ಪ್ರಕರಣ ದಾಖಲಾಗಿದಯೇ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಪ್ರಶ್ನಿಸಿದಾಗ “ನಮಗೆ ಯಾವುದೇ ದೂರು ಬಂದಿಲ್ಲದ ಕಾರಣ ನಾವು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ” ಎಂದು ಹೇಳಿದ್ದರು.

ಡಿಸೆಂಬರ್ 25 ರಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರು ಮಾಡಿದ ಕೋಮು ದ್ವೇಷದ ಭಾಷಣದ ಕುರಿತು ಕರ್ನಾಟಕ ಪೊಲೀಸ್ ಮತ್ತು ಶಿವಮೊಗ್ಗ ಎಸ್ಪಿ ಅವರಿಗೆ ಇಂದು ಬೆಳಿಗ್ಗೆ ದೂರು ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್ ಮಾಡಬೇಕು ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದಾರೆ.

2008ರ ಮಲೆಂಗಾವ್ ಸ್ಪೋಟ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಈ ಹಿಂದೆಯು ಹಲವು ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಗಾಂಧಿ ಕೊಂದ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದರು.

2008ರ ಸೆಪ್ಟಂಬರ್ 29 ರಂದು ಸ್ಪೋಟಕಗಳನ್ನೊಳಗೊಂಡಿದ್ದ ಮೋಟಾರ್ ಸೈಕಲ್‌ ಒಂದನ್ನು ಮಲೆಂಗಾವ್‌ನ ಮಸೀದಿಯೊಂದಕ್ಕೆ ನುಗ್ಗಿಸಿ ಸ್ಪೋಟಿಸಲಾಗಿತ್ತು. ಈ ಘಟನೆಯಲ್ಲಿ 6 ಜನ ಮೃತಪಟ್ಟು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಘಟನೆ ನಡೆದ 10 ವರ್ಷಗಳ ನಂತರ 2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...