Homeಮುಖಪುಟಬಿಜೆಪಿ ಗೆಲುವಿನ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತವಿದೆ: ಸಿದ್ದರಾಮಯ್ಯ

ಬಿಜೆಪಿ ಗೆಲುವಿನ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತವಿದೆ: ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊನ್ನಾವರದ ಯುವಕ ಪರೇಶ ಮೇಸ್ತನ ಸಾವು ಆಕಸ್ಮಿಕ ಹೊರತು ಕೋಮು ಹತ್ಯೆಯಲ್ಲ ಎಂದು ಸಿಬಿಐ ತನಿಖಾ ತಂಡ ಹೊನ್ನಾವರದ ಕೋರ್ಟ್‌ಗೆ ವರದಿ ಸಲ್ಲಿಸಿರುದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯನವರು ಬಿಜೆಪಿ ನಾಯಕರು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ದೂರಿದ್ದಾರೆ.

ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಸರ್ಕಾರದ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಸಂಘಪರಿವಾರ ಹಾಗೂ ಬಿಜೆಪಿ ಆರೋಪಿಸಿತ್ತು. ಮೃತ ಮೇಸ್ತಾನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಲಾಯಿತು. ಆಗಿನ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು.

ಪರೇಶ್ ಮೆಸ್ತಾ ಸಾವು ಮುಂದಿಟ್ಟು ಬಿಜೆಪಿ ತಮ್ಮ ರಾಜಕೀಯ ಮಾಡಿತ್ತು. ಆಗಿನ ಗೃಹ ಮಂತ್ರಿ ರಾಮಲಿಂಗ ರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿಸ್ತೃತ ವಿಚಾರಣೆಗೆ ಕೇಳಿತ್ತು. ಅದಾಗಿಯೂ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ, ದಕ, ಶಿವಮೊಗ್ಗ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಾಂಗ್ರೆಸ್ ವಿರುದ್ಧ ಬಿರುಸಿನ ಪ್ರಚಾರ ನಡೆಸಿತ್ತು ಮಾತ್ರವಲ್ಲ ಭರ್ಜರಿ ಜಯ ಗಳಿಸಿತ್ತು.


ಇದನ್ನೂ ಓದಿ; FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....