ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಭಾನುವಾರ (ನವೆಂಬರ್ 16) ಭೇಟಿ ನೀಡಿದ ತಜ್ಞರ ತಂಡ ನಾಲ್ಕು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದೆ ಎಂದು ವರದಿಯಾಗಿದೆ.
ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಬೆಂಗಳೂರು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ತಜ್ಞರ ತಂಡ ನಾಲ್ಕು ಕೃಷ್ಣ ಮೃಗಗಳ ಕಳೇಬರವನ್ನು ಪರೀಕ್ಷೆ ನಡೆಸಿದೆ ಎಂದು ತಿಳಿದು ಬಂದಿದೆ.
ಮೃಗಾಲಯದಲ್ಲಿ ಕಳೆದ ಗುರುವಾರ 20, ಶನಿವಾರ 9 ಸೇರಿ ಒಟ್ಟು 29 ಕೃಷ್ಣಮೃಗಗಳು ಸಾವನ್ನಪ್ಪಿವೆ. ಈ ಪೈಕಿ 25 ಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿತ್ತು. ಉಳಿದ ನಾಲ್ಕು ಮೃಗಗಳ ಮರಣೋತ್ತರ ಪರೀಕ್ಷೆಯನ್ನು ತಜ್ಞರ ತಂಡ ಭಾನುವಾರ ನಡೆಸಿದೆ ಎಂದು ವರದಿ ತಿಳಿಸಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕೃಷ್ಣಮೃಗಗಳ ಸರಣಿ ಸಾವಿನ ಕುರಿತು ತನಿಖೆ ನಡೆಸಲು ಶನಿವಾರ (ನ.15) ಆದೇಶ ನೀಡಿದ್ದರು.
ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳಿದ್ದವು. ಈ ಪೈಕಿ 4ರಿಂದ 6 ವರ್ಷ ವಯಸ್ಸಿನ 29 ಮೃಗಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಅನುಮಾನ ಇದೆ. ಆದರೂ, ತನಿಖೆ ನಡೆಸಿ ಸಾವಿನ ಕಾರಣವನ್ನು ಪತ್ತೆ ಹಚ್ಚುವುದಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಾಗಲಕೋಟೆ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ


