Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...