Homeಕರ್ನಾಟಕಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ...

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಪ್ರಮುಖ ಆರೋಪಿ ಸಾಗರ್ ಪಾಟೀಲ್ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ , ಮಕ್ಕಳನ್ನು ಕೊಂದು ಶಿಕ್ಷಕನಿಗೆ ಕೆಟ್ಟ ಹೆಸರು ತರಲು ಯತ್ನಿಸಿದ ದುರುಳರು

- Advertisement -
- Advertisement -

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ ಅವರಿಗೆ ಕೆಟ್ಟ ಹೆಸರು ತರಲು ಮತ್ತು ಅವರ ವರ್ಗಾವಣೆ ಆಗಬೇಕು ಎಂಬ ಉದ್ದೇಶದಿಂದ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶನಿವಾರ (ಆ.2) ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಪಿ) ಡಾ. ಭೀಮಾಶಂಕರ ಗುಳೇದ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರಿಂದ ಹಲವು ಮಕ್ಕಳು ಅಸ್ವಸ್ತಗೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲೊಂದು ಬಾಟಲಿ ದೊರೆತಿತ್ತು. ಅದರಲ್ಲಿ ವಿಷದ ಅಂಶ ಇದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರ ಆಧಾರದ ಮೇಲೆ ಮತ್ತು ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಲೇಮಾನ್ ಗೋರಿನಾಯ್ಕ್ ಅವರು ನೀಡಿರುವ ದೂರಿನ ಆಧಾರ ಮೇಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದ್ದಾರೆ.

ಸವದತ್ತಿ ಠಾಣೆಯ ಪೊಲೀಸರು ಬಹಳ ವೈಜ್ಞಾನಿಕವಾಗಿ, ತುಂಬಾ ಮುತುವರ್ಜಿ ವಹಿಸಿಕೊಂಡು ಈ ಪ್ರಕರಣವನ್ನು ಬೇಧಿಸಿದ್ದಾರೆ. ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಹೂಲಿಕಟ್ಟೆ ಗ್ರಾಮದ ಕೃಷ್ಣ ಮಾದರ, ನಾಗನಗೌಡ ಪಾಟೀಲ್ ಮತ್ತು ನಾಗನಗೌಡನ ಹತ್ತಿರದ ಸಂಬಂಧಿ ಸಾಗರ್ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ದುರದೃಷ್ಟಕರ ಸಂಗತಿಯೆಂದರೆ ಬಂಧಿತರೆಲ್ಲ ಯುವಕರು. ನಾಡನ್ನು ಕಟ್ಟಿ ಬೆಳೆಸಬೇಕಾದ ವಯಸ್ಸಲ್ಲಿ ಈ ರೀತಿಯ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ತಮ್ಮ ಕೃತ್ಯಕ್ಕೆ ಒಬ್ಬರ ಬಾಲಕನನ್ನೂ ಬಳಸಿಕೊಂಡಿದ್ದಾರೆ. ಆದರೆ, ತನಿಖೆಯಲ್ಲಿ ಆತ ಅಮಾಯಕ ಎಂದು ಗೊತ್ತಾಗಿದೆ. ಆರೋಪಿಗಳು ಅವನ ಮುಗ್ದತೆಯನ್ನು ತಮ್ಮ ಹೀನಾಯ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಾಗರ್ ಪಾಟೀಲ್. ಈತನೇ ಈ ದುಷ್ಕೃತ್ಯದ ಕಾರಣೀಕರ್ತ. ಈತ ಈ ಆಘಾತಕಾರಿ ಕೃತ್ಯವೆಸಗಲು ಎರಡ್ಮೂರು ತಿಂಗಳಿನಿಂದ ಪೂರ್ವ ತಯಾರಿ ಮಾಡಿಕೊಂಡಿದ್ದ. ಅದಕ್ಕೆ ತನ್ನ ಜೊತೆ ಕೆಲಸ ಮಾಡುತ್ತಿದ್ದ ಚಾಲಕ ಕೃಷ್ಣ ಮಾದರನ ಸಹಾಯ ಪಡೆದಿದ್ದ. ಕೃಷ್ಣಗೆ ಸ್ವಲ್ಪ ಹಣ ಕೊಟ್ಟಿದ್ದ. ಆತನ ಮೂಲಕವೇ ವಿಷ ಖರೀದಿ ಮಾಡಿಸಿದ್ದ. ಅಪ್ರಾಪ್ತ ಬಾಲಕನನ್ನೂ ಆತನ ಮೂಲಕವೇ ಕರೆ ತಂದಿದ್ದ ಎಂದು ವಿವರಿಸಿದ್ದಾರೆ.

ಆರೋಪಿಗಳಾದ ಕೃಷ್ಣ ಮಾದರ ಮತ್ತು ನಾಗನಗೌಡ ಪಾಟೀಲ್ ದುಷ್ಕೃತ್ಯ ಎಸಗುವುದಕ್ಕಿಂತ 6 ದಿನಗಳ ಮುಂಚೆ (8ನೇ ತಾರೀಖು) ಮುನವಲ್ಲಿಗೆ ಹೋಗಿ ರಸಗೊಬ್ಬ ಮತ್ತು ಕೀಟನಾಶಕದ ಅಂಗಡಿಯಿಂದ ವಿಷ ಖರೀದಿಸಿದ್ದರು.
ಅದಕ್ಕೂ ಮುನ್ನ ಹೂಲಿಕಟ್ಟೆಯಲ್ಲಿ ಸಾಗರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದರು ಎಂದು ಎಸ್ಪಿ ಹೇಳಿದ್ದಾರೆ.

13ನೇ ತಾರೀಕು ಆರೋಪಿಗಳು ಮತ್ತೊಮ್ಮೆ ಪರಸ್ಪರ ಚರ್ಚೆ ನಡೆಸಿದ್ದರು. ಅಂದೇ ಸಾಗರ್ ಪಾಟೀಲ್‌ಗೆ ವಿಷದ ಬಾಟಲಿಯನ್ನು ಹಸ್ತಾಂತರಿಸಿದ್ದರು. ಮಾಝಾ ಜ್ಯೂಸ್ ಬಾಟಲಿಯಲ್ಲಿ ವಿಷವನ್ನು ತುಂಬಲಾಗಿತ್ತು. ಸಾಗರ್ ಪಾಟೀಲ್ ರೈತನಾಗಿರುವುದರಿಂದ ಆತನಿಗೆ ಕೀಟನಾಶಕ ಖರೀದಿಸುವ ಅವಕಾಶವಿತ್ತು. ಆತ ಕೃಷ್ಣ ಮಾದರ ಮತ್ತು ನಾಗನಗೌಡನ ಭೇಟಿಗೆ ಬರುವ ಮುನ್ನವೇ ಮಾಝಾ ಬಾಟಲಿಯಲ್ಲಿ ಕೀಟನಾಶಕ ತುಂಬಿಕೊಂಡು ಬಂದಿದ್ದ. ನಂತರ ಇವರಿಬ್ಬರು ತಂದ ಕೀಟನಾಶಕವನ್ನೂ ಅದಕ್ಕೆ ಸೇರಿಸಿದ್ದರು. ನಂತರ ಬಾಟಲಿಯನ್ನು ಕೃಷ್ಣ ಮಾದರ ಕೈಗೆ ಕೊಡಲಾಗಿತ್ತು ಎಂದು ವಿವರಿಸಿದ್ದಾರೆ.

ಕೃಷ್ಣ ಮಾದರ ವಿಷವನ್ನು ತೆಗೆದುಕೊಂಡು ಹೋಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಕೊಟ್ಟಿದ್ದ. ಅದನ್ನು ಶಾಲೆಯ ಟ್ಯಾಂಕ್‌ಗೆ ಸುರಿಯುವಂತೆ ಸೂಚಿಸಿದ್ದ. ಇದಕ್ಕಾಗಿ ಬಾಲಕನಿಗೆ ಸ್ವಲ್ಪ ದುಡ್ಡು ಕೊಟ್ಟಿದ್ದ. ತಿಂಡಿ ತಿನಿಸುಗಳನ್ನು ನೀಡಿ ಪುಸಲಾಯಿಸಿದ್ದ. ಬಾಲಕ ಶಾಲೆಯ ಟ್ಯಾಂಕ್‌ಗೆ ಕೀಟನಾಶಕ ಸುರಿಯುವ ಮುನ್ನ ಈ ಬಾಟಲಿಯಲ್ಲಿ ಏನಿದೆ? ಎಂದು ಕೇಳಿದ್ದ. ಅದಕ್ಕೆ ಆರೋಪಿಗಳು ಇದರಲ್ಲಿ ಜ್ಯೂಸ್ ಇದೆ. ಟ್ಯಾಂಕ್‌ಗೆ ಸುರಿದರೆ ನೀರು ಸಿಹಿಯಾಗುತ್ತದೆ ಎಂದಿದ್ದರು. ಈ ಮಾತನ್ನು ನಂಬಿದ್ದ ಮುಗ್ದ ಬಾಲಕ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದಿದ್ದ. ಬಾಲಕ ವಿಷ ಸುರಿದು ಆ ಟ್ಯಾಂಕ್‌ನಿಂದ ಸ್ವಲ್ಪ ನೀರು ತೆಗೆದುಕೊಂಡು ಬರುವಾಗ ಕೊಂಚ ಗಲಿಬಿಲಿಗೊಂಡಿದ್ದ. ಈ ವೇಳೆ ಆತನ ಕೈಯಿಂದ ವಿಷದ ಬಾಟಲಿ ಕೆಳಗೆ ಬಿದ್ದಿತ್ತು. ಅದು ದುಷ್ಕೃತ್ಯದ ಸುಳಿವನ್ನು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಸಾಗರ್ ಪಾಟೀಲ್, ಇನ್ನೊಬ್ಬ ಆರೋಪಿ ಕೃಷ್ಣ ಮಾದರ ಮೂಲಕ ದುಷ್ಕೃತ್ಯವನ್ನು ಮಾಡಿಸಿದ್ದ. ಮೂಲಗಳ ಪ್ರಕಾರ, ಈ ಕೃಷ್ಣ ಮಾದರ ಅನ್ಯಜಾತಿಯ ಹುಡುಗಿಯೊಬ್ಬರನ್ನು ಪ್ರೀತಿಸುತಿದ್ದಾರೆ. ಇದಕ್ಕೆ ಅಸ್ತ್ರವಾಗಿ ಮಾಡಿಕೊಂಡ ಸಾಗರ್ ಪಾಟೀಲ್, ತಾನು ಹೇಳಿದ ಕೆಲಸ ಮಾಡದಿದ್ದೆ “ನೀನು ಅನ್ಯಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯ ಬಹಿರಂಗಪಡಿಸುತ್ತೇನೆ” ಎಂದು ಬೆದರಿಸಿದ್ದ. ಹಾಗಾಗಿ, ಕೃಷ್ಣ ಮಾದರ ವಿಷ ಬೆರೆಸಲು ಒಪ್ಪಿಕೊಂಡಿದ್ದ ಎನ್ನಲಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...