Homeಕರ್ನಾಟಕಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

- Advertisement -
- Advertisement -

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕು ಮೇಕಳಿ ಗ್ರಾಮದ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮಿ ಅವರನ್ನು ‘ಪೋಕ್ಸೋ’ ಹಾಗೂ ‘ಅಪಹರಣ’ ಪ್ರಕರಣದಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.

ಪಿಯುಸಿ ಓದುತ್ತಿರುವ 17 ವರ್ಷದ ಬಾಲಕಿಯನ್ನು ಕಳೆದ ಮೇ 13ರಂದು ಅಪಹರಿಸಿದ್ದ ಸ್ವಾಮಿ, ನಿರಂತರ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಖುದ್ದು ದೂರು ದಾಖಲಿಸಿದ್ದರು. ದೂರು ಆಧರಿಸಿ ಮೇ 21ರಂದು ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂತ್ರಸ್ತ ಬಾಲಕಿ ಮತ್ತು ಆಕೆಯ ತಂದೆ ಅನಾರೋಗ್ಯದ ಕಾರಣ ಕಳೆದ ಎರಡು ವರ್ಷಗಳಿಂದ ಆರೋಪಿ ಸ್ವಾಮಿಯ ಮಠಕ್ಕೆ ಭೇಟಿ ಕೊಡುತ್ತಿದ್ದರು. ಸ್ವಾಮಿಗೆ ಭಕ್ತಿಯಿಂದ ನಡೆದುಕೊಳ್ಳುತ್ತಿದ್ದರು. ಮೇ 13ರಂದು ಬಾಲಕಿ ತನ್ನ ಸೋದರ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಆಕೆಯನ್ನು ನೋಡಿದ ಸ್ವಾಮಿ, ಮನೆಗೆ ಬಿಡುವುದಾಗಿ ಕಾರಿಗೆ ಹತ್ತಿಸಿಕೊಂಡಿದ್ದರು. ಬಳಿಕ ಮನೆ ಮುಂದೆ ಇಳಿಸದೆ ಬೆದರಿಸಿ ರಾಯಚೂರಿಗೆ ಕರೆದುಕೊಂಡು ಹೋಗಿದ್ದರು. ಅಲ್ಲಿನ ಲಾಡ್ಜ್‌ವೊಂದರಲ್ಲಿ ಬಾಲಕಿಯನ್ನು ಉಳಿಸಿಕೊಂಡು ಮೇ 13 ಮತ್ತು 14ರಂದು ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿರುವುದಾಗಿ ವರದಿಗಳು ಹೇಳಿವೆ.

ಮುಂದುವರಿದು, ಮೇ 15ರಂದು ಬಾಗಲಕೋಟೆಗೆ ಬಾಲಕಿಯನ್ನು ಕರೆದೊಯ್ದ ಸ್ವಾಮಿ, ಅಲ್ಲಿನ ಲಾಡ್ಜ್‌ವೊಂದರಲ್ಲಿ ಇಡೀ ದಿನ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಮೇ 16ರಂದು ಬಾಲಕಿ ಮನೆಗೆ ಹೋಗಬೇಕೆಂದು ಅಳಲು ಶುರು ಮಾಡಿದಾಗ, ಮಹಾಲಿಂಗಪುರ ಪಟ್ಟಣಕ್ಕೆ ಕರೆದೊಯ್ದು ಬಸ್‌ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು. ವಿಷಯ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆದ್ದರಿಂದ ಸುಮ್ಮನಿದ್ದೆ ಎಂದು ಬಾಲಕಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಆರಂಭದಲ್ಲಿ ಸುಮ್ಮನಿದ್ದ ಬಾಲಕಿ, ಬಳಿಕ ತನ್ನ ತಂದೆಗೆ ವಿಷಯ ತಿಳಿಸಿದ್ದರು. ಮೇ 21ರಂದು ಪೋಷಕರೊಂದಿಗೆ ಬಾಗಲಕೋಟೆ ಮಹಿಳಾ ಠಾಣೆಗೆ ಹೋಗಿ ದೂರು ನೀಡಿದ್ದರು. ಪೊಲೀಸರು ಪ್ರಕರಣವನ್ನು ಅಲ್ಲಿಂದ ಮೂಡಲಗಿ ಠಾಣೆಗೆ ವರ್ಗಾಯಿಸಿದ್ದರು. ಮೂಡಲಗಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ. ಅವರನ್ನು ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...