Homeಕರ್ನಾಟಕಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

- Advertisement -
- Advertisement -

ದಡಾರ ಮತ್ತು ರುಬೆಲ್ಲಾ (ಎಂಆರ್) ಲಸಿಕೆಗಳನ್ನು ಪಡೆದ ಬೆಳಗಾವಿ ಜಿಲ್ಲೆಯ ರಾಮದುರ್ಗದ ಮೂವರು ಮಕ್ಕಳ ಸಾವು ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ತಿಳಿಸಿದ್ದಾರೆ.

ಮಕ್ಕಳಿಗೆ ಲಸಿಕೆ ನೀಡಿದ್ದ ನರ್ಸ್, ಫಾರ್ಮಸಿಸ್ಟ್ ಬೇಜವಾಬ್ದಾರಿಯಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿ ಬಂದಿದೆ. ಹೀಗಾಗಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಮಕ್ಕಳಿಗೆ ಸೆಪ್ಟಿಕ್ ಶಾಕ್ ಸಿಂಡ್ರೋಮ್‌ ಆಗಿರಬಹುದು. ದುರಂತದ ಕುರಿತು ಹೆಚ್ಚುವರಿ ತನಿಖೆಗಾಗಿ ನೊಡಲ್ ಅಧಿಕಾರಿಯನ್ನು ಕಳುಹಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಮೃತಪಟ್ಟ ಮೂವರು ಮಕ್ಕಳನ್ನು ರಾಮದುರ್ಗ ತಾಲೂಕಿನ ಬೋಚಬಾಳ್ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು) ಮತ್ತು ಮಧು ಉಮೇಶ ಕರಗುಂಡಿ (14 ತಿಂಗಳು) ಮತ್ತು ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ್ (15 ತಿಂಗಳು) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ಆರೋಗ್ಯಾಧಿಕಾರಿಗಳ ಪ್ರಕಾರ, “ರಾಮದುರ್ಗದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ.11 ಮತ್ತು 12 ರಂದು ಎರಡು ದಿನಗಳ ಕಾಲ ಮಾಸಿಕ ಮಾಸಿಕ ಲಸಿಕಾ ಅಭಿಯಾನ ನಡೆಯಿತು. ಜನವರಿ 12 ರಂದು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 21 ಮಕ್ಕಳಿಗೆ ಎಂಆರ್ ಮತ್ತು ಇತರ ಲಸಿಕೆಗಳನ್ನು ನೀಡಲಾಯಿತು. ಆದರೆ ಲಸಿಕೆಗಳನ್ನು ತೆಗೆದುಕೊಂಡಿದ್ದ ನಾಲ್ಕು ಮಕ್ಕಳು ಅಸ್ವಸ್ಥರಾದರು. ಅವರಲ್ಲಿ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ, ಒಂದು ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದೆ” ಎಂದಿದ್ದಾರೆ.

“ಬೋಚಬಾಳ ಗ್ರಾಮದ ಒಂದೇ ಲಸಿಕಾ ಕೇಂದ್ರದಲ್ಲಿ ಮಕ್ಕಳಿಗೆ ಮಾಸಿಕ ಲಸಿಕೆ ಹಾಗೂ ಕೋವಿಡ್ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ, ಅವರ ಕಡೆಯಿಂದಲೇ ಲೋಪಗಳಾಗಿವೆ” ಎಂದು ಆರೋಪಿಸಿದ್ದಾರೆ ಎಂದು ಬೋಚಬಾಳ ಗ್ರಾಮ ಪಂಚಾಯಿತಿ ಸದಸ್ಯ ಭೀಮಶಿ ಹಾದಿಮನಿ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

’ಎಂಆರ್ ಲಸಿಕೆ ಹಾಕಿದ ನಂತರ ಮಕ್ಕಳಲ್ಲಿ ವಾಂತಿ, ಬೇಧಿಯಂತಹ ಹೊಸ ಲಕ್ಷಣಗಳು ಕಂಡು ಬಂದವು. ಒಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ್ದೇವೆ. ನಾವು ಮೂತ್ರ, ಮಲ ಮತ್ತು ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಜ್ಯ ಮಟ್ಟದ ಮತ್ತು ರಾಷ್ಟ್ರೀಯ ಮಟ್ಟದ ಪ್ರಯೋಗಾಲಯಗಳಿಗೆ ಕಳುಹಿಸಿದ್ದೇವೆ. ನಾನು ವರದಿಯನ್ನು ಸಲ್ಲಿಸಲು ಆರ್‌ಸಿಒಗೆ ನಿರ್ದೇಶನ ನೀಡಿದ್ದೇನೆ. ವರದಿಯನ್ನು ಪಡೆದ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಹೇಳಿದ್ದಾರೆ.


ಇದನ್ನೂ ಓದಿ: ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...