Homeಕರ್ನಾಟಕಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ವಿರುದ್ಧ ಪ್ರಕರಣ ದಾಖಲಾಗಲಿ: ಬಿ.ಕೆ. ಹರಿಪ್ರಸಾದ್

ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ವಿರುದ್ಧ ಪ್ರಕರಣ ದಾಖಲಾಗಲಿ: ಬಿ.ಕೆ. ಹರಿಪ್ರಸಾದ್

- Advertisement -
- Advertisement -

ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಾಗಬೇಕು. ಹಾಗೆಯೇ ಈ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಶನಿವಾರ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹರಿಪ್ರಸಾದ್ ಅವರು, “ಬೆಲೆಕೇರಿ ಅಕ್ರಮ ಅದಿರು ಕಳ್ಳ ಸಾಗಾಣೆ ಪ್ರಕರಣದಲ್ಲಿ ಅರಣ್ಯದ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ವಶಪಡಿಸಿಕೊಂಡಿದ್ದರು. ಆದರೆ ಈ ಅದಿರನ್ನು ಅದಾನಿ ಸಂಸ್ಥೆ ಭಾರೀ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಮಾಡಿದೆ” ಎಂದು ಆರೋಪಿಸಿದ್ದಾರೆ. ಈ ವೇಳೆ ಲೋಕಾಯುಕ್ತ ವರದಿಯನ್ನೂ ಅವರು ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಿರನ್ನು ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುವ ಬಗ್ಗೆ ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿದೆ. ಅದಾನಿ ಎಂಟರ್‌ಪ್ರೈಸಸ್, ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ, ರಾಜ್ ಮಹಲ್ ಕಂಪನಿ ಮತ್ತು ಮಲ್ಲಿಕಾರ್ಜುನ ಶಿಪ್ಪಿಂಗ್‌ ಈ ಕೃತ್ಯವನ್ನು ಮಾಡಿದೆ. ಈ ಎಲ್ಲಾ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆ ಶಿಫಾರಸು ಮಾಡಿದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ನಡೆಸಿರುವ ಸಿಬಿಐ ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ, ರಾಜ್ ಮಹಲ್ ಕಂಪನಿ ಮತ್ತು ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಆರೋಪಿಗಳು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಇದಾದ ಬಳಿಕ ಸದ್ಯ ಶಿಕ್ಷೆಯನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟಿದೆ. ಆದರೆ ಅದಾನಿ ಸಂಸ್ಥೆ ವಿರುದ್ಧ ಯಾವುದೇ ತನಿಖೆ ನಡೆದಿಲ್ಲ. ಈ ಬಗ್ಗೆ ನಿರಂತರವಾಗಿ ವಿಪಕ್ಷಗಳು ಬೊಟ್ಟು ಮಾಡುತ್ತಿದೆ.

ಇದನ್ನೂ ಓದಿ: ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...