Homeಮುಖಪುಟಬೆಳಗಾವಿ: ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿಗೆ ಥಳಿತ -ಕರವೇ ಪ್ರತಿಭಟನೆ

ಬೆಳಗಾವಿ: ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿಗೆ ಥಳಿತ -ಕರವೇ ಪ್ರತಿಭಟನೆ

- Advertisement -
- Advertisement -

ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಅದು ಕಾಲೇಜು ಹಂತದವರೆಗೂ ವ್ಯಾಪಿಸಿರುವುದು ದುರಂತ. ನಿನ್ನೆ ಬೆಳಗಾವಿಯ ಗೋಗ್ಟೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಮಹಾರಾಷ್ಟ್ರ ಬೆಂಬಲಿಸುವ ಸಹಪಾಠಿಗಳು ಥಳಿಸಿದ್ದಾರೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗಾವಿಯ ಗೋಗ್ಟೆ ಕಾಲೇಜಿನ ಫೆಸ್ಟ್ ನಡೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ್ದಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಬೆಂಬಲಿಸುವು ವಿದ್ಯಾರ್ಥಿಗಳು ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ-ಗೋವಾ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಕೆಲವು ಹಳ್ಳಿಗಳು ಸೇರಿದ ಕೆಲ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ. ಮಹಾರಾಷ್ಟ್ರದ ಕೆಲವು ಹಳ್ಳಿಗಳು ಮತ್ತು ಜಿಲ್ಲೆಗಳು ಕರ್ನಾಟಕ್ಕೆ ಸೇರಬೇಕೆಂದು ಕರ್ನಾಟಕ ಸರ್ಕಾರ ವಾದಿಸುತ್ತಿದೆ. ಈ ಕುರಿತು ನೇಮಿಸಲಾಗಿದ್ದ ಮಹಾಜನ್ ಆಯೋಗವು “ಕರ್ನಾಟಕದಲ್ಲಿನ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಹೋಗಲಿ ಮತ್ತು ಮಹಾರಾಷ್ಟ್ರದ ಕೆಲ ತಾಲ್ಲೂಕುಗಳು ಕರ್ನಾಟಕಕ್ಕೆ ಬರಲಿ” ಎಂದು ವರದಿ ಸಲ್ಲಿಸಿತ್ತು. ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಅರ್ಜಿ ವಿಚಾರಣೆ ನಡೆಯುತ್ತಿದ್ದು, ಅಂತಿಮ ಹಂತದ ವಾದ ವಿವಾದ ನಿನ್ನೆ ನವೆಂಬರ್ 30 ರಂದು ನಡೆಯಬೇಕಿತ್ತು. ಆದರೆ ಜಲ್ಲಿ ಕಟ್ಟು ವಿವಾದದ ವಿಚಾರಣೆ ದೀರ್ಘ ಸಮಯ ತೆಗೆದುಕೊಂಡ ಕಾರಣ ಗಡಿವಿವಾದ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.

ಇದನ್ನೂ ಓದಿ: ಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...