Homeಕರ್ನಾಟಕಬೆಳಗಾವಿ: ಬಸವಣ್ಣನ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಬೆಳಗಾವಿ: ಬಸವಣ್ಣನ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿರುವ ಗ್ರಾಮಸ್ಥರು ಆರೋಪಿಗಳಿಗೆ ಶಿಕ್ಷೆ ನೀಡುವುದರ ಜೊತೆಗೆ ಹೊಸ ಪ್ರತಿಮೆ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

- Advertisement -

ಬೆಳಗಾವಿಯ ಬಿಜಾಗುಪ್ಪಿ ಗ್ರಾಮದಲ್ಲಿರುವ ಬಸವಣ್ಣನ ಪ್ರತಿಮೆಯ ಕೈಯ್ಯನ್ನು ಕಡಿದಿರುವ ದುಷ್ಕರ್ಮಿಗಳು ಪ್ರತಿಮೆಗೆ ಹಾನಿ ಮಾಡಿದ್ದಾಗಿ ವರದಿಯಾಗಿದೆ. ಘಟನೆಯನ್ನು ವಿರೋಧಿಸಿ ಗ್ರಾಮದ ನಿವಾಸಿಗಳು ಪ್ರತಿಭಟನೆ ನಡೆಸಿದ್ದು ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆಗೆ ಧಾವಿಸಿದ ಗ್ರಾಮಸ್ಥರು, ಪೊಲೀಸರು ಕೂಡಲೆ ತನಿಖೆ ನಡೆಸಿ, ಆರೋಪಿಗಳನ್ನು ಗುರುತಿಸಿ ಬಂಧಿಸುವಂತೆ ಒತ್ತಾಯಿಸಿದ್ದು, ಸರ್ಕಾರವು ಸ್ಥಳದಲ್ಲಿ ಹೊಸ ಪ್ರತಿಮೆಯನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಆಕ್ರೋಶ, ಖಂಡನೆ

ಘಟನೆ ನಡೆದ ಗ್ರಾಮಕ್ಕೆ ಭೇಟಿ ನೀಡಿದ ರಾಮ್‌ದುರ್ಗ್‌ನ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ್, ಒಂದು ತಿಂಗಳಲ್ಲಿ ಹೊಸ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

ನ್ಯಾಯಯುತ ತನಿಖೆ ನಡೆಸಿ ಅಪರಾಧಿಗಳನ್ನು ಒಂದು ವಾರದಲ್ಲಿ ಬಂಧಿಸುವಂತೆ ನಾನು ಪೊಲೀಸರನ್ನು ಕೇಳಿಕೊಂಡಿದ್ದಾಗಿ ಹೇಳಿರುವ ಅವರು, ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ದುಷ್ಕರ್ಮಿಗಳು ಬಸವಣ್ಣನ ಮೂರ್ತಿಗೆ ಹಾನಿ ಎಸಗಿರುವುದನ್ಉ ಗಮನಿಸಿದ ಕೆಲವು ಗ್ರಾಮಸ್ಥರು ಭಾನುವಾರ ಬೆಳಿಗ್ಗೆ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು, ಶಾಂತಿ ಕಾಪಾಡಿಕೊಳ್ಳಲು ಹೆಚ್ಚುವರಿ ಪಡೆಗಳನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

0
ಉತ್ತರ ಪ್ರದೇಶದ ಗೋರಖ್‌ಪುರದಿಂದ ಕಣಕ್ಕಿಳಿದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ರಾವಣ್‌ ಕಣಕ್ಕಿಳಿಯಲಿದ್ದಾರೆ. ಚಂದ್ರಶೇಖರ್‌ ಆಜಾದ್‌ ಸ್ಪರ್ಧೆಯಿಂದಾಗಿ ಗೋರಕ್‌ಪುರ ವಿಧಾನಸಭಾ ಕ್ಷೇತ್ರ ಉತ್ತರ ಪ್ರದೇಶದ...
Wordpress Social Share Plugin powered by Ultimatelysocial