Homeಕರ್ನಾಟಕಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿಯ ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಮುಖಂಡ ಹೆಚ್‌‌.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್ ವ್ಯಂಗ್ಯ

“ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್‌ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

“ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2 ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ” ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ –

“ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು” ಎಂದು ಅವರು ಹೇಳಿದ್ದಾರೆ.

“ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ?” ಎಂದು ಬಿಜೆಪಿಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ: ವೀಲ್‌ ಚೇರ್‌ನಲ್ಲಿಯೇ ರೋಡ್‌ ಶೋ ನಡೆಸಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...