Homeಕರ್ನಾಟಕಬೆಳಗಾವಿ | ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಮೀಸಲಾತಿ ಪ್ರತಿಭಟನೆ

ಬೆಳಗಾವಿ | ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಮೀಸಲಾತಿ ಪ್ರತಿಭಟನೆ

- Advertisement -
- Advertisement -

2ಎ ವರ್ಗದ ಅಡಿಯಲ್ಲಿ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಸಂಘಟನೆಗಳು ಮಂಗಳವಾರ ಬೆಳಗಾವಿಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ತಿರುಗಿದ

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ್ ಬೆಲ್ಲದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆಯೂ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿತು. ಹಿಂಸಾಚಾರಕ್ಕೆ ತಿರುಗಿದ

ಪ್ರತಿಭಟನೆ ಕಾರಣಕ್ಕೆ ಸುವರ್ಣಸೌಧ ಸಂಕೀರ್ಣದ ಮುಂಭಾಗದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವೂ ಅಸ್ತವ್ಯಸ್ತಗೊಂಡಿತು. ಸರ್ಕಾರ ಪ್ರತಿಭಟನಾಕಾರರನ್ನು ಮಾತುಕತೆಗೆ ಆಹ್ವಾನಿಸಿದ್ದರೂ ಅವರು ಆಗಮಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. “ಇದು ಪ್ರಜಾಪ್ರಭುತ್ವ ಆಗಿರುವುದರಿಂದ, ನಾವು ಪ್ರತಿಭಟನೆಗಳನ್ನು ವಿರೋಧಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮುದಾಯದ ಮುಖಂಡರ ವಿರೋಧದ ನಡುವೆಯೂ ಜಯಮೃತ್ಯುಂಜಯ ಸ್ವಾಮಿ ಪ್ರತಿಭಟನೆಯನ್ನು ಘೋಷಿಸಿದ್ದಾರೆ. 5,000 ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳೊಂದಿಗೆ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅವರು ಹೇಳಿದ್ದರೂ, ಬೆಳಗಾವಿ ಜಿಲ್ಲಾಡಳಿತ ಅದಕ್ಕೆ ಅನುಮತಿ ನಿರಾಕರಿಸಿದ್ದರಿಂದ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಲು ಅವಕಾಶ ನೀಡಿತು.

ಪ್ರತಿಭಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕಿನ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪ್ರತಿಭಟನೆಗಳನ್ನು ನಿಗ್ರಹಿಸಲು ರಾಜ್ಯ ಸರ್ಕಾರ “ಅಡಾಲ್ಫ್ ಹಿಟ್ಲರ್ ಮಾರ್ಗ” ವನ್ನು ಆಶ್ರಯಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪಂಚಮಸಾಲಿ ಶ್ರೀಗಳನ್ನು ಅವಮಾನಕರವಾಗಿ ನಡೆಸಿಕೊಳ್ಳಲಾಗಿದೆ ಎಂದ ಅವರು, ಶಾಂತಿ ಕದಡಲು ಯತ್ನಿಸಿದರೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. ಅವರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಸರ್ಕಾರ ಮತ್ತು ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಿಂಸಾಚಾರಕ್ಕೆ ತಿರುಗಿದ

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...