Homeಚಳವಳಿಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! - ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ 'ಬೆಲ್ಲಾ ಚಾವ್'

ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’

"ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು"

- Advertisement -
- Advertisement -

ಪ್ರತಿರೋಧದ ಗೀತೆಯಾಗಿ ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿರುವ ‘ಬೆಲ್ಲಾ ಚಾವ್’ ಹಾಡು ಇದೀಗ ರೈತರ ಪ್ರತಿಭಟನೆಯನ್ನೂ ಪ್ರತಿಧ್ವನಿಸುತ್ತಿದೆ. ಇಟಲಿ ಮೂಲದ ಈ ಹಾಡನ್ನು 27 ವರ್ಷದ ಪೂಜನ್ ಸಾಹಿಲ್ ಪಂಜಾಬಿ ಭಾಷೆಗೆ ಅನುವಾದಿಸಿ ಹಾಡಿದ್ದಾರೆ. ಹೋರಾಟನಿರತ ರೈತರೇ ಆರಂಭಿಸಿರುವ ಯೂಟೂಬ್ ಚಾನೆಲ್‌ನಲ್ಲಿ ಇದು ಕೇವಲ ಒಂದು ವಾರದಲ್ಲಿ 2 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿ ದಾಖಲೆ ಮಾಡಿದೆ. ಪ್ರಸ್ತುತ ಈ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿಯ ಶಾಲೆಯೊಂದರಲ್ಲಿ ಗಣಿತ ಪಾಠ ಮಾಡುವ ಸಾಹಿಲ್, “ಸಾಮಾಜಿಕ ಪ್ರಜ್ಞೆಯಿರುವ ಸಂಗೀತಗಾರನಿಗೆ ಭಯ, ನಿಂದನೆ ಮತ್ತು ನಿರಾಶೆಗಳು ಒಂದು ಕೋರ್ಸ್‌ಗೆ ಸಮನಾಗಿರುತ್ತದೆ. ನಮ್ಮ ಪದಗಳು ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ಬಲ ನೀಡಿದರೆ ಅದು ಸಾರ್ಥಕವಾದಂತೆ. ಕೇಂದ್ರವು ತನ್ನ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಲು ಈ ಮೂಲಕ ಒತ್ತಾಯಿಸುತ್ತಿದ್ದೇನೆ” ಎಂದು ಪಿಟಿಐಗೆ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ದೇಶದಾದ್ಯಂತ ನಡೆದ ಸಿಎಎ ಪ್ರತಿಭಟನೆಯ ಸಂದರ್ಭದಲ್ಲಿ ‘ಬೆಲ್ಲಾ ಚಾವ್’ ಹಾಡನ್ನು ಹಿಂದಿಗೆ ಅನುವಾದ ಮಾಡಿ ಹಾಡಲಾಗಿತ್ತು. ಕಳೆದ ಜುಲೈನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ಮನಿ ಹೈಸ್ಟ್‌’ ವೆಬ್‌ ಸರಣಿಯಲ್ಲಿ ಈ ಮೂಲ ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದರಿಂದ ವಿಶ್ವದಾದ್ಯಂತ ಈ ಹಾಡು ಇನ್ನಷ್ಟು ಜನಪ್ರಿಯತೆ ಗಳಿಸಿತು.

ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

“ನಾನು ಈಗಾಗಲೇ ಭಾರತದ ವಿವಿಧ ವಿದ್ಯಾರ್ಥಿ ಪ್ರತಿಭಟನೆಗಳಲ್ಲಿ ‘ಬೆಲ್ಲಾ ಚಾವ್’ ಹಾಡಿನ ಹಿಂದಿ ಅನುವಾದ ‘ವಾಪಾಸ್ ಜಾವೊ’ ಹಾಡನ್ನು ರಚಿಸಿದ್ದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಂತರ ಇದನ್ನು ಸಿಎಎ ಪ್ರತಿಭಟನೆಗಳಲ್ಲಿ ಹಲವು ಬಾರಿ ಬಳಸಿಕೊಳ್ಳಲಾಗಿದೆ. ಈ ಹಾಡಿನ ಇತಿಹಾಸವನ್ನು ಗಮನಿಸಿದಾಗ ಇದು ರೈತರ ಪ್ರತಿಭಟನೆಗೆ ಚೆನ್ನಾಗಿ ಹೊಂದುತ್ತದೆ ಎಂದು ನಾನು ಭಾವಿಸಿದೆ” ಎಂದು ಸಾಹಿಲ್ ಹೇಳಿದರು.

ಉತ್ತರ ಇಟಲಿಯಲ್ಲಿ 19 ನೇ ಶತಮಾನದ ಉತ್ತರಾರ್ಧದಲ್ಲಿ “ಬೆಲ್ಲಾ ಚಾವ್” (ಗುಡ್‌ಬೈ ಬ್ಯೂಟಿಫುಲ್) ಹಾಡು ಹುಟ್ಟಿಕೊಂಡಿತ್ತು. ಅಲ್ಲಿನ ಮಹಿಳಾ ರೈತರು ಕಠಿಣ ಕೆಲಸದ ಸಂದರ್ಭಗಳಲ್ಲಿ ಇದನ್ನು ಹಾಡುತ್ತಿದ್ದರು. ನಂತರ ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು. ನಂತರದ ವರ್ಷಗಳಲ್ಲಿ ಇದು ಗ್ರೀಸ್, ಫ್ರಾನ್ಸ್ ಸೇರಿದಂತೆ ಜಗತ್ತಿನಾದ್ಯಂತ ನಡೆಯುವ ಎಲ್ಲಾ ಪ್ರತಿಭಟನೆಯಲ್ಲಿಯೂ ಬಳಕೆಗೆ ಬಂತು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಹಾಡಿನ ಪಂಜಾಬಿ ಸಾಹಿತ್ಯದ ಅನುವಾದದಲ್ಲಿ, ಸಾಮಾಜಿಕ ಸಾಮರಸ್ಯ, ನಾಗರಿಕ ಸಮಾಜದ ಅಭಿಯಾನ, ರೈತರ ತ್ಯಾಗ, ಕೇಂದ್ರದ ಕೃಷಿ ಕಾನೂನುಗಳಿಗೆ ವಿರೋಧ, ಪ್ರತಿಭಟನೆ ಮುಂತಾದ ಅಂಶಗಳು ಧ್ವನಿಸಿದೆ.

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ’ಶಗ್ಗಿ ಬೈನ್’ಗೆ ಬುಕರ್: ಜೀವನ ಸಂಘರ್ಷವೇ ಈ ಕತೆಗಾರನ ಜೀವಾಳ ಮತ್ತು ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...