Homeಕರ್ನಾಟಕಬಳ್ಳಾರಿ | ಬಾಣಂತಿಯರ ಸಾವು : 5 ಲಕ್ಷ ಪರಿಹಾರ, ತನಿಖೆಗೆ ತಂಡ ರಚನೆ

ಬಳ್ಳಾರಿ | ಬಾಣಂತಿಯರ ಸಾವು : 5 ಲಕ್ಷ ಪರಿಹಾರ, ತನಿಖೆಗೆ ತಂಡ ರಚನೆ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಹಿನ್ನೆಲೆ, ಔಷಧ ಖರೀದಿ ಮತ್ತು ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಆಗಿರುವ ಲೋಪಗಳ ಕುರಿತು ತನಿಖೆಗೆ ತಂಡ ರಚಿಸಲಾಗಿದೆ.

ಟೆಂಡರ್ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ (ಕೆಎಸ್‌ಎಂಎಸ್‌ಸಿಎಲ್‌) ಆಗಿರುವ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಕೌಶಲ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ನೇತೃತ್ವದ ಪರಿಶೀಲನಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ.

ತಂಡದಲ್ಲಿ ಔಷಧ ನಿಯಂತ್ರಣ ಇಲಾಖೆಯ ಕೇಂದ್ರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಮೈಕ್ರೋ ಬಯೋಲಜಿಸ್ಟ್ ಡಾ.ಅಸೀಮಾ ಬಾನು, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಕುಲಪತಿಯಿಂದ ನಾಮನಿರ್ದೇಶಿತರಾದ ಹಿರಿಯ ಫಾರ್ಮಾಲಜಿ ಪ್ರಾಧ್ಯಾಪಕರು ಇರಲಿದ್ದಾರೆ.

ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣವನ್ನು ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ಖರೀದಿಸಲಾಗಿದೆ. ನ.30ರವರೆಗೆ 196 ಬ್ಯಾಚ್‌ಗಳಲ್ಲಿ ಈ ದ್ರಾವಣ ಖರೀದಿಸಲಾಗಿದೆ. ಇದರಲ್ಲಿ ಲೋಪಗಳಾಗಿದೆಯಾ? ಎಂಬ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸರ್ಕಾರ ಆದೇಶದಲ್ಲಿ ಸೂಚಿಸಿದೆ.

5 ಲಕ್ಷ ರೂ. ಪರಿಹಾರ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಭಾನುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಆಗಿದೆ. ಮುಖ್ಯಮಂತ್ರಿಗಳು ಇನ್ನೂ 3 ಲಕ್ಷ ಸೇರಿಸಲು ಹೇಳಿದ್ದಾರೆ. ಹಾಗಾಗಿ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ : ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಒಂಬತ್ತು ಮಂದಿ ಗರ್ಭಿಣಿಯರಾದ ನಂದಿನಿ, ಲಲಿತಮ್ಮ, ಸುಮಯ್ಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ನವೆಂಬರ್​ 9ರಂದು ಸಿಸೇರಿಯನ್​ ಮೂಲಕ ಹೆರಿಗೆ ಮಾಡಲಾಗಿತ್ತು. ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಹೆರಿಗೆ ಬಳಿಕ ನೀಡಲಾದ ಐವಿ ದ್ರಾವಣ ಬಾಣಂತಿಯರ ಸಾವಿಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ : ಇಂದಿನಿಂದ ಚಳಿಗಾಲದ ಅಧಿವೇಶನ : ಅಭಿವೃದ್ದಿ ಚರ್ಚೆ ಅನುಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...