Homeಕರ್ನಾಟಕತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

ತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

- Advertisement -
- Advertisement -

ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯ ಬಳಿ ಸುಟ್ಟು ಹೋಗಿದ್ದ ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45), ಮದ್ದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ನಿವಾಸಿ ಇಮ್ತಿಯಾಝ್(34) ಅವರ ಮೃತದೇಹ ಇದು ಎಂದು ಹೇಳಲಾಗಿದೆ.

ಇಂದು ಸಾರ್ವಜನಿಕರು ಕೆರೆ ಬಳಿ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೂರು ಮಂದಿ ಬೆಳ್ತಂಗಡಿಯಿಂದ ಬಾಡಿಗೆ ಕಾರು ಮಾಡಿಕೊಂಡು ತುಮಕೂರು ಕಡೆಗೆ ತೆರಳಿರುವ ಸಾಧ್ಯತೆ ಇದೆ.

ಸ್ಥಳಕ್ಕೆ ಹಿರಿಯ ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಲವರು ಭೇಟಿ ನೀಡಿದ್ದು, ಈ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ. ಘಟನೆಗೆ ಸಂಬಂಧ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೆಎ43 ರಿಜಿಸ್ಟ್ರೇಷನ್‌ ನಂಬರಿನ ಎಸ್‌ಪ್ರೆಸ್‌ ಕಾರು ರಫೀಕ್‌ ಎಂಬುವವರಿಗೆ ಸೇರಿದ್ದೆಂದು ಹೇಳಲಾಗಿದೆ. ಮೃತದೇಹ ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಯಾವ ವಿಷಯಕ್ಕೆ ಸಂಬಂಧಪಟ್ಟಂತೆ ತುಮಕೂರು ಕಡೆಗೆ ಈ ಮೂವರು ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ.

ಐದು ಜನರು ಕಾರಿನಲ್ಲಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನದಳ, ಎಫ್.ಎಸ್.ಎಲ್ ತಂಡ ಭೇಟಿ ನೀಡಿ ತನಿಖೆಯನ್ನು ನಡೆಸುತ್ತಿದ್ದಾರೆ. ಸ್ಥಳೀಯರು ಯಾವುದೋ ವ್ಯವಾಹಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರುವ ಶಂಕೆ ವ್ಯಕ್ತಡಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮೃತರು ಕುಟುಂಬಸ್ಥರು ಮತ್ತು ಸ್ಥಳೀಯರು ಬೆಳ್ತಂಗಡಿಯಿಂದ ತುಮಕೂರಿಗೆ ತೆರಳಿದ್ದಾರೆ.

ಇದನ್ನು ಓದಿ: ಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...