Homeಕರ್ನಾಟಕಬೆಳ್ತಂಗಡಿ: ಸೌಜನ್ಯಾ ಪರ ಬ್ಯಾನರ್ ಗಳ  ತೆರವಿಗೆ ಸೂಚನೆ

ಬೆಳ್ತಂಗಡಿ: ಸೌಜನ್ಯಾ ಪರ ಬ್ಯಾನರ್ ಗಳ  ತೆರವಿಗೆ ಸೂಚನೆ

- Advertisement -
- Advertisement -

ಸೌಜನ್ಯಾ ಪ್ರಕರಣಗಳಿಗೆ ಸಂಬಂಧಿಸಿದ ಬ್ಯಾನರ್‌ಗಳನ್ನು ಹಾಗೂ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಪಿಡಿಒಗಳಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದ್ದು, ಸೌಜನ್ಯ ನ್ಯಾಯದ ಪರ ಹೋರಾಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ಬ್ಯಾನರ್ ತೆರವಿಗೆ ಪೊಲೀಸ್ ವೃತ್ತ ನಿರೀಕ್ಷಕರು ಬರೆದ ಮನವಿ ಪತ್ರದ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಬ್ಯಾನರ್ ತೆರವಿಗೆ ಆಗ್ರಹಿಸಿ ‘ಬೆಳ್ತಂಗಡಿಯ ಪ್ರಜ್ಞಾವಂತ ನಾಗರಿಕರು’ ಎಂಬ ಹೆಸರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಯಲಾಗಿದ್ದು,  ಪತ್ರದಲ್ಲಿ ತಾಲೂಕಿನಲ್ಲಿ ತನಿಖಾ ಸಂಸ್ಥೆಗಳನ್ನು ಹಾಗೂ ಸೌಜನ್ಯ ಪ್ರಕರಣದ ತೀರ್ಪನ್ನು ಟೀಕಿಸುವ, ಯಾರ್ಯಾರನ್ನೋ  ಅಪರಾಧಿಗಳಾಗಿ ಬಿಂಬಿಸಿಕೊಂಡು ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ಸಮಾಜದಲ್ಲಿ ಅಶಾಂತಿಯುಂಟಾಗುವ ಸಾಧ್ಯತೆಯಿದ್ದು, ಅವುಗಳನ್ನು ತೆರವುಗೊಳಿಸುವಂತೆ ಮನವಿ ಮಾಡಲಾಗಿತ್ತು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಎಸ್ಪಿ ಸೂಚಿಸಿದ್ದಾರೆ. ಅದರ ಆಧಾರದಲ್ಲಿ ವೃತ್ತ ನಿರೀಕ್ಷಕರು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದರು.

ಇದರಿಂದಾಗಿ ತಾಪಂ ಕಾರ್ಯನಿರ್ವಹಣಾಧಿಕಾರಿಯವರು ಎಲ್ಲ ಗ್ರಾಮಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸೌಜನ್ಯ ಪರ ಬ್ಯಾನರ್ ಗಳು ಸೇರಿ ಎಲ್ಲಾ ಅನಧಿಕೃತ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ:ದೆಹಲಿ ಸೇವಾ ಮಸೂದೆಗೆ ಅನುಮೋದನೆ: ದೇಶದ ಇತಿಹಾಸದಲ್ಲೇ ಇದು ಕರಾಳ ದಿನ ಎಂದು ಕಿಡಿಕಾರಿದ ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...