Homeಕರ್ನಾಟಕಬೆಳ್ತಂಗಡಿ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ವಸಂತ ಬಂಗೇರ ನಿಧನ

- Advertisement -
- Advertisement -

ಬೆಳ್ತಂಗಡಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್‌ ನಾಯಕ ಕೆ. ವಸಂತ ಬಂಗೇರ ಅವರು ಇಂದು ನಿಧನರಾಗಿದ್ದಾರೆ.

79ರ ಹರೆಯದ ಕೆ.ವಸಂತ ಬಂಗೇರ ಇಂದು ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1,946ರ ಜನವರಿ 15ರಂದು ಜನಿಸಿದ್ದ ವಸಂತ ಬಂಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಅವರು ಬೆಳ್ತಂಗಡಿ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುದೀರ್ಘ ರಾಜಕೀಯ ಜೀವನದಲ್ಲಿ ವಸಂತ ಬಂಗೇರ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ರಾಜಕೀಯವನ್ನು ನಡೆಸಿದ್ದರು.

ಮೇ 9ರಂದು ಮುಂಜಾನೆ ಕೆ.ವಸಂತ ಬಂಗೇರ ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನು ಓದಿ: ದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...