Homeಕರ್ನಾಟಕಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ವಿಚಾರಣೆಗೆ ಕರೆದೊಯ್ದ ಪೊಲೀಸರು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ವಿಚಾರಣೆಗೆ ಕರೆದೊಯ್ದ ಪೊಲೀಸರು

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ ಅವರ ತೇಜೋವಧೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇಲೆ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಗುರುವಾರ ವಿಚಾರಣೆಗೆ ಕರೆದೊಯ್ದಿದ್ದಾರೆ.

ಉಜಿರೆ ಸಮೀಪದ ತಿಮರೋಡಿಯಲ್ಲಿರುವ ಮಹೇಶ್ ಶೆಟ್ಟಿ ಅವರ ಮನೆಗೆ ಆಗಮಿಸಿದ ಉಡುಪಿಯ ಬ್ರಹ್ಮಾವರ ಠಾಣೆ ಪೊಲೀಸರು, ಅವರನ್ನು ವಿಚಾರಣೆಗೆ ಕರೆದೊಯ್ಯಲು ಮುಂದಾದರು. ಈ ವೇಳೆ ಸ್ಥಳದಲ್ಲಿ ಜಮಾಯಿಸಿದ್ದ ಮಹೇಶ್ ಶೆಟ್ಟಿ ಬೆಂಬಲಿಗರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿ.ಎಲ್ ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಮಾಡಿ ಮಹೇಶ್ ಶೆಟ್ಟಿ ಅವರು ಸಂತೋಷ್ ಅವರನ್ನು ಅವಹೇಳನ ಮಾಡಿದ್ದಾರೆ. ಅಲ್ಲದೆ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯಗಳ ನಡುವೆ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅದರಂತೆ ಬಿಎನ್‌ಎಸ್ ಸೆಕ್ಷನ್ 196(1), 352, 353(2) ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಚಾರಣೆಗೆ ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಹೇಶ್ ಶೆಟ್ಟಿ, “ಸುಳ್ಳು ಪ್ರಕರಣ ದಾಖಲಿಸಿ ನಮ್ಮನ್ನು ಬಂಧಿಸಲಾಗುತ್ತಿದೆ. ಇದು ಎಸ್ಐಟಿ ತನಿಖೆ ಮುಚ್ಚಿಸಲು ಮಾಡಿರುವ ಷಡ್ಯಂತ್ರ. ಇದು ಬಿಜೆಪಿಯವರ ಪಾಪದ ಕೂಸು. ಅವರು ಸರ್ವ ನಾಶ ಆಗಿ ಹೋಗುತ್ತಾರೆ. ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ. ಸೌಜನ್ಯಾಗೆ ನ್ಯಾಯ ಸಿಗಬೇಕು. ನ್ಯಾಯ ಖಂಡಿತಾ ಸಿಗುತ್ತದೆ. ನನ್ನ ಜೀವಕ್ಕೆ ಏನಾದರೂ ಅಪಾಯ ಆದರೆ ಅದಕ್ಕೆ ಸರ್ಕಾರ ಮತ್ತು ಬಿಜೆಪಿ ಕಾರಣ” ಎಂದು ಹೇಳಿದರು.

ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟೆಣ್ಣನವರ್ ಖಾಸಗಿ ಕಾರಿನಲ್ಲಿ ಪೊಲೀಸರ ಜೊತೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...