Homeಕರ್ನಾಟಕಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆ ಆರೋಪಿಗಳಿಗೆ ಹಿಂದುತ್ವ ಸಂಘಟನೆಗಳು ಸನ್ಮಾನ ಮಾಡಿರುವುದನ್ನು ಖಂಡಿಸಿ ಇಂದು (ಅ.22) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್‌) ದಲ್ಲಿ ಗೌರಿ ಬಳಗದಿಂದ ಪ್ರತಿಭಟನೆ ನಡೆಯಿತು.

ಇತ್ತೀಚೆಗೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿರುವ ಗೌರಿ ಹತ್ಯೆ ಪ್ರಕರಣದ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆಗೆ ವಿಜಯಪುರದಲ್ಲಿ ಸನ್ಮಾನ ಮಾಡಿರುವುದು ಮತ್ತು ಇನ್ನೋರ್ವ ಆರೋಪಿ ಶ್ರೀಕಾಂತ್ ಪಾಂಗಾರ್ಕರ್‌ ಅನ್ನು ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಸೇರಿಸಿಕೊಂಡಿರುವುದರ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯವ್ಯಾಪಿ ನಾಗರಿಕ ಆಕ್ರೋಶದ ಭಾಗವಾಗಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೌರಿ ಸ್ಮಾರಕ ಟ್ರಸ್ಟ್‌ ಅಧ್ಯಕ್ಷ ವಿ.ಎಸ್‌ ಶ್ರೀಧರ್ ಅವರು, “ಗೌರಿ ಹತ್ಯೆ ಆರೋಪಿಗಳಿಗೆ ಜಾಮೀನು ದೊರೆತಿದೆಯಷ್ಟೆ, ಅವರು ಆರೋಪ ಮುಕ್ತರಾಗಿಲ್ಲ. ಜಾಮೀನು ಸಿಕ್ಕಾಗಲೇ ಅವರಿಗೆ ಸನ್ಮಾನ ಮಾಡಿರುವುದು ಆತಂಕದ ವಿಚಾರ. ಆರೋಪಿಗಳಿಗೆ ಸನ್ಮಾನ ಮಾಡುವ ಮೂಲಕ ಗೌರಿ ಹತ್ಯೆಯ ಹಿಂದೆ ಇರುವುದು ನಾವೇ ಎಂದು ಸಂಘ ಪರಿವಾರ ಒಪ್ಪಿಕೊಳ್ಳುತ್ತಿದೆ” ಎಂದರು.

ಈದಿನ.ಕಾಂನ ಬಿ.ಸಿ ಬಸವರಾಜ್ ಅವರು ಮಾತನಾಡಿ, “ಹತ್ಯೆ, ಅತ್ಯಾಚಾರ ಆರೋಪಿಗಳಿಗೆ ಸನ್ಮಾನ ಮಾಡುವ ಪ್ರಕರಣಗಳು ಉತ್ತರ ಭಾರತದಲ್ಲಿ ವರದಿಯಾಗುತ್ತಿತ್ತು. ಕರ್ನಾಟಕದಲ್ಲಿ ಆದ ಉದಾಹರಣೆಗಳಿಲ್ಲ. ಇಲ್ಲಿ ಮೊದಲ ಬಾರಿಗೆ ಈ ರೀತಿ ಆಗಿದೆ. ಕುವೆಂಪು, ಬವಸಣ್ಣನ ನಾಡಿನಲ್ಲಿ ಈ ರೀತಿಯ ಘಟನೆ ನಡೆದಿರುವುದು ವಿಷಾದನೀಯ” ಎಂದು ಹೇಳಿದರು.

ಚಿಂತಕ ಶಿವಸುಂದರ್ ಅವರು ಮಾತನಾಡಿ, “ಆರೋಪಿಗಳಿಗೆ ಸನ್ಮಾನ ಮಾಡುವ ಮೂಲಕ ಗೌರಿ ಹತ್ಯೆ ಹಿಂದೆ ನಾವೇ ಇರುವುದು ಎಂದು ಸಂಘ ಪರಿವಾರ ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದೆ. ಗೌರಿ ಹತ್ಯೆ ಪ್ರಕರಣದ ವಿಚಾರಣೆಯಲ್ಲೂ ವಿಳಂಬವಾಗುತ್ತಿದೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದರೂ ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ವಿಳಂಬವಾಗಿದೆ. ಹಾಗಾಗಿ, ಈ ಪ್ರಕರಣದಲ್ಲಿ ತ್ವರಿತ ವಿಚಾರಣೆ ನಡೆಯಬೇಕಿದೆ” ಎಂದು ಆಗ್ರಹಿಸಿದರು.

ಪ್ರತಿಭಟನಾ ಸಭೆಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿಯ ಚೆನ್ನಮ್ಮ, ವಕೀಲರಾದ ವಿನಯ್ ಶ್ರೀನಿವಾಸ್, ಪೂರ್ಣ, ಹೋರಾಟಗಾರ್ತಿ ಎಸ್‌ ವರಲಕ್ಷಿ ಸೇರಿದಂತೆ ಗೌರಿ ಲಂಕೇಶ್ ಸಂಗಾತಿಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು ಇದ್ದರು.

ಇದನ್ನೂ ಓದಿ : ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...