Homeಚಳವಳಿ'ಆಟ ಶುರು - ಬಂಗಾಳದಲ್ಲಿ ಬಿಜೆಪಿ ತೊಲಗಿಸಿ': ರಾಕೇಶ್ ಟಿಕಾಯತ್ ಕರೆ

‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ದುರದೃಷ್ಟಕರ ಎಂದು ಕರೆದಿರುವ ರಾಕೇಶ್‌ ಟಿಕಾಯತ್, ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂಗಾಳದಾದ್ಯಂತ ಪ್ರಯಾಣಿಸುವುದಾಗಿ ಹೇಳಿದ್ದಾರೆ.

- Advertisement -
- Advertisement -

ಸುಮಾರು 110 ದಿನಗಳಿಂದ, ಐದು ಲಕ್ಷಕ್ಕೂ ಹೆಚ್ಚು ರೈತರು ದೆಹಲಿಯ ಗಡಿಗಳಲ್ಲಿ ತಮ್ಮ ಹಕ್ಕುಗಳಿಗಾಗಿ ಕುಳಿತು ಹೋರಾಡುತ್ತಿದ್ದಾರೆ. ಅಲ್ಲೆ ರಸ್ತೆ ಪಕ್ಕ ಶಾಶ್ವತ ಮನೆಗಳನ್ನು ನಿರ್ಮಿಸಿರುವ 5 ಲಕ್ಷಕ್ಕೂ ಹೆಚ್ಚು ಜನರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಬಿಜೆಪಿಗೆ ಚುನಾವಣಾ ಭಾಷೆ ಮಾತ್ರ ಅರ್ಥವಾಗುತ್ತದೆ. ಹಾಗಾಗಿ ಖೇಲಾ ಹೊಬೆ (ಆಟ ಶುರು) ಆರಂಭವಾಗಿದೆ, ಬಂಗಾಳದಲ್ಲಿ ಬಿಜೆಪಿ ತೊಲಗಿಸಿ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬಂಗಾಳ ಚುನಾವಣೆಯಲ್ಲಿಯೇ ತೀವ್ರ ಪೈಪೋಟಿ ಮತ್ತು ಕುತೂಹಲ ಹುಟ್ಟಿಸಿದರು ನಂದಿಗ್ರಾಮದಲ್ಲಿ ನಡೆದ ರೈತ ಮಹಾ ಪಂಚಾಯತ್‌ ಉದ್ದೇಶಿಸಿ ಮಾತನಾಡಿದ ಅವರು “ಇನ್ನು ಮುಂದೆ ಆಟ ಶುರುವಾಗಲಿದೆ ಎಂದು ಹೇಳುತ್ತಾ, ಬಂಗಾಳಿ ಭಾಷೆಯಲ್ಲಿ ಖೇಲಾ ಹೋಬ್ (ಗೇಮ್ ಆನ್) ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಮಹಾಪಂಚಾಯತ್‌ನಲ್ಲಿ ನೆರೆದಿದ್ದ ಜನಸಮೂಹ ಖೇಲಾ ಹೋಬ್ ಎಂದು ಘೋಷಣೆಗಳನ್ನು ಕೂಗಿ ಟಿಕಾಯತ್‌ ಮಾತಿಗೆ ಸಮ್ಮತಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

“ಇದು ಬಂಗಾಳದ ಜನರಿಗೆ ನನ್ನ ಸಂದೇಶವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಲೂಟಿ ಮಾಡಿದೆ. ಅವರಿಗೆ ಮತ ನೀಡಬೇಡಿ. ಬಿಜೆಪಿ ನಾಯಕರು ನಿಮ್ಮ ಬಳಿ ಮತ ಕೇಳಲು ಬಂದಾಗ, ಅವರಿಗೆ ನಮ್ಮ ಬೆಳೆಗಳಿಗೆ ಎಂಎಸ್‌ಪಿ ಯಾವಾಗ ನೀಡುತ್ತಿರಿ ಎಂದು ಪ್ರಶ್ನಿಸಿ” ಎಂದು ಕರೆ ನೀಡಿದ್ದಾರೆ.
ದೆಹಲಿ-ಉತ್ತರ ಪ್ರದೇಶ ಗಡಿಯಾದ ಗಾಝಿಪುರ್‌‌ ಗಡಿಯಲ್ಲಿ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಬೃಹತ್ ರೈತರ ಪ್ರತಿಭಟನೆಯನ್ನು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮುನ್ನಡೆಸುತ್ತಿದ್ದಾರೆ.

ಒಕ್ಕೂಟ ಸರ್ಕಾರದ ವಿರುದ್ಧ ಪ್ರಚಾರ ನಡೆಸಲು ಆರಂಭಿಸಿರುವ ರೈತರು ಇಂದು ಪಶ್ಚಿಮ ಬಂಗಾಳದಲ್ಲಿ ಮಹಾಪಂಚಾಯತ್‌ ನಡೆಸುತ್ತಿದ್ದಾರೆ. ರೈತ ಮುಖಂಡ ಟಿಕಾಯತ್‌ ಅವರನ್ನು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ ಸಂಸದ ಡೋಲಾ ಸೇನ್ ಅವರು ಸ್ವಾಗತಿಸಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ದುರದೃಷ್ಟಕರ ಎಂದು ಕರೆದಿರುವ ರಾಕೇಶ್‌ ಟಿಕಾಯತ್, ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂಗಾಳದಾದ್ಯಂತ ಪ್ರಯಾಣಿಸುವುದಾಗಿ ಹೇಳಿದ್ದಾರೆ. ಆದರೆ, ಇಂತಹ ಪಕ್ಷಕ್ಕೆ ಮತ ನೀಡಿ ಎಂದು ಯಾರಿಗೂ ತಿಳಿಸುವುದಿಲ್ಲ ಎಂದು ಈ ಮೊದಲೇ ರೈತ ನಾಯಕರು ತಿಳಿಸಿದ್ದರು.

ಬಿಜೆಪಿ ವಿರುದ್ಧ ಪಂಚರಾಜ್ಯಗಳಲ್ಲೂ ಪ್ರಚಾರ ನಡೆಸುವುದಾಗಿ ಈಗಾಗಲೇ ರೈತರು ಪ್ರಕಟಿಸಿದ್ದಾರೆ. ಆದರೆ ಯಾವುದೇ ಪಕ್ಷದ ಪರವಾಗಿ ಮತ ಯಾಚನೆ ಮಾಡುವುದಿಲ್ಲ, ಪ್ರಚಾರ ನಡೆಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ, ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...