HomeUncategorizedಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

- Advertisement -
- Advertisement -

ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಬಂಕುರಾ ಜಿಲ್ಲೆಯ ನಿಧಿರಾಂಪುರ ಗ್ರಾಮದಲ್ಲಿ ಅವರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ನಾಯಕ ಶುಭದೀಪ್ ಮಿಶ್ರಾ ಅಲಿಯಾಸ್ ದೀಪು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅವರನ್ನು ಕೊಲೆ ಮಾಡಿ ನಂತರ ಮರಕ್ಕೆ ನೇಣು ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನೂ ಆರಂಭಿಸಿದರು. ವೈಯಕ್ತಿಕ ಕಲಹದಿಂದ ಈ ಘಟನೆ ನಡೆದಿದೆಯೇ ಅಥವಾ ರಾಜಕೀಯ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಮಿಶ್ರಾ ಅವರು ಅನೈತಿಕ ಸಂಬಂಧ ಹೊಂದಿದ್ದ ಗ್ರಾಮದ ವಿವಾಹಿತ ಮಹಿಳೆಯ ಕುಟುಂಬದವರು ಅವರನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ.

”ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಆಜ್ಞೆಯ ಮೇರೆಗೆ ಮಿಶ್ರಾ ಅವರನ್ನು ಕೊಲೆ ಮಾಡಲಾಗಿದೆ” ಎಂದು ಬಿಜೆಪಿ ಆರೋಪಿಸಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಈ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ”ಟಿಎಂಸಿ ಗೂಂಡಾಗಳು ಸುಭದೀಪ್ ಮಿಶ್ರಾ ಅವರನ್ನು ಹತ್ಯೆಗೈದು ಕೈಗಳನ್ನು ಕಟ್ಟಿ ಮರಕ್ಕೆ ನೇತು ಹಾಕಿದ್ದಾರೆ. ಬಂಕುರಾ ಜಿಲ್ಲೆಯ ಸುಭದೀಪ್ ಮಿಶ್ರಾ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು, 2023ರ ಪಂಚಾಯತ್ ಚುನಾವಣೆಯಲ್ಲಿ ನಿಧಿರಾಂಪುರದಿಂದ ಸಾಲ್ತೋರಾ ವಿಧಾನಸಭಾ ಕ್ಷೇತ್ರದ ಗಂಗಾಜಲಘಾಟಿ ಬ್ಲಾಕ್‌ನ ಲೋಟಿಯಬೋನಿ ಆಂಚಲ್‌ನಲ್ಲಿ ಸ್ಪರ್ಧಿಸಿದ್ದರು. ಟಿಎಂಸಿ ಕಳ್ಳರು ಮತ್ತು ಗೂಂಡಾಗಳು ಅವರ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅವರನ್ನು ಹತ್ಯೆ ಮಾಡಲಾಗಿದೆ” ಎಂದು ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

”ಇದೊಂದು ಕೊಲೆ. ಶವದ ವಿಡಿಯೋವನ್ನು ಪೋಸ್ಟ್ ಮಾಡಿದ್ದೇನೆ, ಅದರಲ್ಲಿ ಮುಖವನ್ನು ಮಸುಕುಗೊಳಿಸಲಾಗಿದೆ. ಅವನ ಕೈಗಳನ್ನು ಕಟ್ಟಿಹಾಕಲಾಗಿದೆ ಎಂದು ಸ್ಪಷ್ಟವಾಗಿ ತೋರಿಸಲಾಗಿದೆ. ಯಾರೂ ತಮ್ಮ ಕೈಗಳನ್ನು ಕಟ್ಟಿದ ನಂತರ ಮರಕ್ಕೆ ನೇಣು ಹಾಕಿಕೊಳ್ಳಲು ಸಾಧ್ಯವಿಲ್ಲ. ಅವರ ಕೈಗಳನ್ನು ಕಟ್ಟಿರುವುದು ಸ್ಪಷ್ಟವಾಗಿ ಕಾಣುತ್ತದೆ. ಅವರ ಕೈಗಳನ್ನು ಕಟ್ಟಿಹಾಕಿ ನಂತರ ಮರಕ್ಕೆ ನೇಣು ಹಾಕಲಾಯಿತು.ಇದು ರಾಜಕೀಯ ಕೊಲೆ ಎಂದು ನಾವು ಭಾವಿಸುತ್ತೇವೆ. ಕುಟುಂಬದ ಬೇಡಿಕೆಯನ್ನು ನಾವು ಒಪ್ಪುತ್ತೇವೆ ಮತ್ತು ನಾವು ಕೂಡ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಅಧಿಕಾರಿ  ಪೋಸ್ಟ್ ಮಾಡಿದ್ದಾರೆ.

ಅಧಿಕಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋಗುತ್ತಿದೆ ಹೇಳಿದೆ.

ತೃಣಮೂಲದ ಹಿರಿಯ ನಾಯಕ ಹಾಗೂ ಸಂಪುಟ ಸಚಿವ ಶಶಿ ಪಂಜ ಸುದ್ದಿಗಾರರೊಂದಿಗೆ ಮಾತನಾಡಿ, ”ಇಲ್ಲಿ ಬಿಜೆಪಿಯ ಪಾತ್ರವೇನು? ಅದು ಬಿಜೆಪಿ ಬೆಂಬಲಿಗ ಅಥವಾ ಟಿಎಂಸಿ ಬೆಂಬಲಿಗರಾಗಿರಬಹುದು, ಆದರೆ ಕುಟುಂಬವು ಏನು ಹೇಳುತ್ತದೆ ಎಂಬುದನ್ನು ನಾವು ನೋಡಬೇಕು. ಕುಟುಂಬ ಸದಸ್ಯರು ಇನ್ನೊಬ್ಬರತ್ತ ಬೆರಳು ತೋರಿಸುತ್ತಿದ್ದಾರೆ. ವೈಯಕ್ತಿಕ ಸಮಸ್ಯೆ ಈ ಸಾವಿಗೆ ಕಾರಣವಾಯಿತು ಎಂದು ಹೇಳುತ್ತಿದ್ದಾರೆ,  ಈ ಸಾವು ಸಂಭವಿಸಿದ ಕೆಲವೇ ಕ್ಷಣದಲ್ಲಿ ಬಿಜೆಪಿ ಹೋರಾಟಕ್ಕೆ ಧುಮುಕುತ್ತದೆ, ಇದು ರಣಹದ್ದು ರಾಜಕೀಯ” ಎಂದು ಕಿಡಿಕಾರಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...