Homeಮುಖಪುಟಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಿಜೆಪಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ವ್ಯಂಗ್ಯವಾಡಿದ್ದಾರೆ. 

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಉಪಚುನಾವಣೆಗಳ ಮೂಲಕ ಮುಂದುವರಿಯುತ್ತಿದೆ. ಇತ್ತೀಚೆಗೆ ನಡೆದಿರುವ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಭದ್ರತಾ ಠೇವಣಿಯನ್ನೂ ಕಳೆದುಕೊಂಡಿದ್ದು, ಭಾರಿ ಮುಖಭಂಗಕ್ಕೆ ಒಳಗಾಗಿದೆ.

ರಾಜ್ಯದ ದೀನ್‌ಹಟಾ ಮತ್ತು ಶಾಂತಿಪುರ್‌ ಕ್ಷೇತ್ರಗಳು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ದೀನ್‌ಹಟಾದಲ್ಲಿ ಆರು ತಿಂಗಳ ಹಿಂದೆಯಷ್ಟೇ ಬಿಜೆಪಿಯಿಂದ ನಿಸಿತ್‌ ‌ಪ್ರಮಾಣಿಕ್ ಗೆದ್ದುಕೊಂಡಿದ್ದರು. ನಂತರ ಅವರಿಗೆ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ನೀಡಲಾಗಿತ್ತು. ಇದರಿಂದಾಗಿ ಅವರು ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಶಾಂತಿಪುರದಲ್ಲಿ ಗೆಲುವು ಕಂಡಿದ್ದ ಜಗನ್ನಾಥ್‌ ಸರ್ಕಾರ್‌‌ ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾಗಿದ್ದ ಅನಿವಾರ್ಯತೆ ಬಿಜೆಪಿಗೆ ಉಂಟಾಗಿತ್ತು. ಆದರೆ ಬಿಜೆಪಿ ಶಾಂತಿಪುರದಲ್ಲಿ ತನ್ನ ಠೇವಣಿಯನ್ನು ಮಾತ್ರವೇ ಉಳಿಸಿಕೊಂಡಿದೆ.

ಉಳಿದಂತೆ ಈ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಗೆಲುವು ಕಂಡಿದ್ದ ದೀನ್‌ಹಟಾವಾಗಲಿ, ಖಾರ್ದಹೊ ಮತ್ತು ಗೋಸಬಾದ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದ್ದು, ತನ್ನ ಠೀವಣಿಯನ್ನೂ ಉಳಿಸಿಕೊಂಡಿಲ್ಲ.

ರಾಜ್ಯದ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಭರ್ಜರಿ ಗೆಲುವಿನ ಬಗ್ಗೆ ಪತ್ರಿಕ್ರಿಯಿಸಿರುವ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಬಿಜೆಪಿಯ ಜನರಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೂ ಮುಂಚೆ ಹಲವಾರು ಜನರು ಟಿಎಂಸಿಯಿಂದ ಬಿಜೆಪಿಗೆ ವಲಸೆ ಹೋಗಿದ್ದರು. ಆದರೆ ವಿಧಾನಸಭೆಯ ಚುನಾವಣೆ ನಡೆದು ಫಲಿತಾಂಶ ಘೋಷಿಣೆಯಾಗಿ ರಾಜ್ಯದಲ್ಲಿ ಟಿಎಂಸಿ ಸರ್ಕಾರ ರಚನೆಯಾದ ಸ್ವಲ್ಪ ಸಮಯದಲ್ಲೇ, ಇದು ಉಲ್ಟಾ ಆಗಿದೆ. ಬಿಜೆಪಿ ಸೇರಿದ್ದ ಟಿಎಂಸಿಯ ಕಾರ್ಯಕರ್ತರು, ಶಾಸಕರು, ಮಾಜಿ ನಾಯಕರು ಮತ್ತೇ ಟಿಎಂಸಿ ಸೇರಿದ್ದಾರೆ. ಈ ಸರಣಿ ಇನ್ನೂ ಮುಂದುವರೆದಿದ್ದು, ಇದು ಬಿಜೆಪಿಗೆ ತೀವ್ರ ಮುಖಭಂಗ ನೀಡಿದೆ. ಈ ನಡುವೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಮೇವ ಪಕ್ಷವಾಗಿ ಮುನ್ನುಗ್ಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಷ್ಟೊಂದು ಒಳ್ಳೆಯ ಲಕ್ಷಣಗಳಲ್ಲ ಎಂಬ ಮಾತು ಕೂಡಾ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಸಿರುವ ಕ್ರುಶಿಕ ಎವಿ ಅವರು, “ಬಂಗಾಳದಲ್ಲಿ ಮಂದಿಯಾಳ್ವಿಕೆಗೆ ಅನಾರೋಗ್ಯಕರವಾದ ಅಧಿಕಾರ ಕೇಂದ್ರೀಕರಣ ಆಗುತ್ತಿದೆ. ಒಂದೇ ಪಕ್ಷದ ಅಡಿಯಲ್ಲಿ ಭಾರೀ ಬಹುಮತ, ವಿಪಕ್ಷದಲ್ಲಿ ಬಿಜೆಪಿ ಒಂದೇ ಉಸಿರಾಡುತ್ತಿದೆ. ಬಾಕಿ ಯಾವುದೆ ಪಕ್ಷಗಳು ಇಲ್ಲವೇ ಇಲ್ಲ!. ಹೀಗಾದಲ್ಲಿ ವ್ಯವಸ್ಥೆ ಹೇಗೆ ವರ್ತಿಸಬಹುದು? ಇಂದಿರಾ ಗಾಂಧಿಯಂತೆ ಸರ್ವಾಧಿಕಾರಿಯಾಗಿ ಮಮತಾ ಸರ್ವಾಧಿಕಾರಿ ನರೇಂದ್ರ ಮೋದಿಯ ಎದುರು ಅವರೇ ಸರಿ ಅನ್ನೋ ಭಾವನೆ!.

ಬಿಜೆಪಿ ಮಾಡಿದ ಖರ್ಚು, ಮತಿಯವಾಗಿ ಒಡೆದ ಜನ ಸಮುದಾಯ, ಮಾಡಿದ ಕೀಟಲೆ ಎಲ್ಲಾ ಮಮತಾ ಅಧಿಕಾರ ಇನ್ನಷ್ಟು ಗಟ್ಟಿಯಾಗಿಸಿದೆ. ಇದು ಒಳ್ಳೆಯದು ಮಾಡಬಹುದು ಇಲ್ಲವೇ ಭಾರಿ ಕಷ್ಟವನ್ನೇ ಬಂಗಾಳಕ್ಕೆ ತರಬಹುದು!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....