Homeಮುಖಪುಟಬಂಗಾಳ: ಮಮತಾ ಬ್ಯಾನರ್ಜಿಗೆ 24 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ಬಂಗಾಳ: ಮಮತಾ ಬ್ಯಾನರ್ಜಿಗೆ 24 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ರಾತ್ರಿ 8 ಗಂಟೆಯವರೆಗೆ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ. ಕೇಂದ್ರ ಪಡೆಗಳ ವಿರುದ್ಧ ಮಾಡಿದ ಆರೋಪ ಹಾಗೂ ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಂಗಡಿಸಲು ಅವಕಾಶ ನೀಡದಂತೆ ಮಾಡಿದ್ದ ಮನವಿಯು ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗವು ಹೇಳಿದೆ.

ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಯ ಬಗ್ಗೆ ಚುನಾವಣಾ ಆಯೋಗವು ಏಪ್ರಿಲ್ 7 ಮತ್ತು ಏಪ್ರಿಲ್ 8 ರಂದು ಮಮತಾ ಅವರಿಗೆ ನೋಟಿಸ್ ನೀಡಿತ್ತು.

ಚುನಾವಣಾ ಆಯೋಗವು ಏಪ್ರಿಲ್ 7 ರಂದು ನೀಡಿದ್ದ ನೋಟಿಸ್‌ನಲ್ಲಿ, ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಭಜಿಸದಂತೆ ಕೇಳಿಕೊಂಡಿದ್ದರು ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಂಗಾಳ: ‘ಬಿಜೆಪಿ ಸೆಂಚುರಿ ಹೊಡೆದಿದೆ; ಮಮತಾ ಕ್ಲೀನ್ ಬೌಲ್ಡ್‌’ – ನರೇಂದ್ರ ಮೋದಿ

ಏಪ್ರಿಲ್ 8 ರಂದು ನೀಡಿದ್ದ ನೋಟಿಸ್‌ನಲ್ಲಿ, ಮಮತಾ ಅವರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಗಳು ಅವಾಂತರಗಳನ್ನು ಸೃಷ್ಟಿಸಿದರೆ ಅವರನ್ನು ಘೆರಾವ್‌ ಮಾಡಲು ಮಹಿಳೆಯರನ್ನು ಕೇಳಿದ್ದಾರೆ ಎಂದು ಉಲ್ಲೇಖಿಸಿತ್ತು.

ಇವೆರೆಡಕ್ಕೂ ಮಮತಾ ಬ್ಯಾನರ್ಜಿ ಅವರು ಉತ್ತರಿಸಿದ್ದರಾದರೂ, ಚುನಾವಣಾ ಆಯೋಗವು, ಮಮತಾ ಬ್ಯಾನರ್ಜಿ ನೀಡಿದ್ದ ಉತ್ತರದಲ್ಲಿ ತನ್ನ ಭಾಷಣದ ಪ್ರಮುಖ ಭಾಗಗಳನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಹೇಳಿತ್ತು.

ಆದ್ದರಿಂದ ಮಮತಾ ಬ್ಯಾನರ್ಜಿ ಅವರು ನೀತಿ ಸಂಹಿತೆ, ಜನರ ಪ್ರಾತಿನಿಧ್ಯ ಕಾಯ್ದೆ-1951 ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗವು ಅಭಿಪ್ರಾಯಪಟ್ಟಿತ್ತು. ಅವರ ಹೇಳಿಕೆಗಳನ್ನು ಖಂಡಿಸಿದ ಆಯೋಗ, ನೀತಿ ಸಂಹಿತೆ ಜಾರಿಯಲ್ಲಿರುವಾಗ ಇಂತಹ ಹೇಳಿಕೆಗಳನ್ನು ಸಾರ್ವಜನಿಕವಾಗಿ ಬಳಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ಸೋಮವಾರ ರಾತ್ರಿ 8 ಗಂಟೆಯಿಂದ 24 ಗಂಟೆಗಳ ಕಾಲ ಪ್ರಚಾರ ಮಾಡುವುದನ್ನು ನಿಷೇಧಿಸಿದೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದ ಚುನಾವಣೆ ನಡೆಯಲಿದ್ದು, ನಾಲ್ಕು ಹಂತಗಳು ಈಗಾಗಲೇ ಮುಗಿದಿದೆ. ಏಪ್ರಿಲ್ 17 ರಂದು ಐದನೇ ಹಂತದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....