Homeಮುಖಪುಟಬಂಗಾಳ ಚುನಾವಣೆ: ಕೊರೊನಾ ಕರಿನೆರಳಿನಲ್ಲಿ 6ನೇ ಹಂತದ ಮತದಾನ

ಬಂಗಾಳ ಚುನಾವಣೆ: ಕೊರೊನಾ ಕರಿನೆರಳಿನಲ್ಲಿ 6ನೇ ಹಂತದ ಮತದಾನ

ಕೊರೊನಾ ಉಲ್ಬಣದ ನಡುವೆ ಬಂಗಾಳದಲ್ಲಿ ಅಮಿತ್ ಶಾ ಮೂರು ರ್‍ಯಾಲಿಗಳು, ದಿಲೀಪ್ ಘೋಷ್ 4 ರೋಡ್ ಶೋಗಳು, ಸುವೇಂಧು ಅಧಿಕಾರಿ ಕೋಲ್ಕತ್ತಾದಲ್ಲಿ 3 ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆಯಿಂದ ದೇಶದಲ್ಲಿ ಜನ ತತ್ತರಿಸಿದ್ದಾರೆ. ಇಂತಹ ಸಮಯದಲ್ಲೂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿದೆ. 8 ಹಂತಗಳ ಮತದಾನದಲ್ಲಿ ಇನ್ನೂ 2 ಹಂತಗಳು ಬಾಕಿ ಇವೆ.

ಮತದಾನದ ಹಂತಗಳನ್ನು ಕಡಿಮೆ ಮಾಡಿ ಒಂದೇ ದಿನ ಚುನಾವಣೆ ನಡೆಸಿ ಎಂದು ಹಲವು ಬಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಆದರೆ ಚುನಾವಣಾ ಆಯೋಗ ಅವರ ಮನವಿಯನ್ನು ತಿರಸ್ಕರಿಸಿದೆ.

ಕೊರೊನಾ ಪ್ರಕರಣಗಳ ಕರಿನೆರಳಿನಲ್ಲಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಚುನಾವಾಣ ರ್‍ಯಾಲಿಗಳಿಂದ ಕೊರೊನಾ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಬಂಗಾಳದಲ್ಲಿ ಪ್ರತಿದಿನದ ಕೊರೊನಾ ಪ್ರಕರಣಗಳು 10,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 10,748 ಹೊಸ ಪ್ರಕರಣಗಳನ್ನು ದಾಖಲಿಸಿದೆ. ಈ ಹಂತದಲ್ಲಿ ನಾಲ್ಕು ಜಿಲ್ಲೆಗಳಲ್ಲಿ 43 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಇದನ್ನೂ ಓದಿ: ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಉತ್ತರ 24 ಪರಗಣ ಜಿಲ್ಲೆಯ 17 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ, ನಾಡಿಯಾ ಮತ್ತು ಉತ್ತರ ದಿನಾಜ್‌ಪುರದಲ್ಲಿ ತಲಾ ಒಂಬತ್ತು ಮತ್ತು ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಎಂಟು ಮತದಾನ ಆರಂಭವಾಯಿತು.

ಆರನೇ ಹಂತದ ಮತದಾನ ಹಲವಾರು ಪ್ರಮುಖ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ. ಮೂವರು ಮಂತ್ರಿಗಳು, ಮೂವರು ಚಲನಚಿತ್ರ ತಾರೆಯರು, ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡ ಮೊದಲ ತೃಣಮೂಲ ನಾಯಕ ಮುಕುಲ್ ರಾಯ್ ಅವರ ಭವಿಷ್ಯ ಇಂದು ಮತ ಪೆಟ್ಟಿಗೆಯಲ್ಲಿ ಭದ್ರವಾಗಲಿದೆ.

ಮತದಾನ ನಡೆಯುತ್ತಿರುವ ಈ 43 ಸ್ಥಾನಗಳು, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮತ ಪಾಲನ್ನು ಹೆಚ್ಚಾಗಲು ಭಾರಿ ಕೊಡುಗೆ ನೀಡಿವೆ. 2016 ರ ವಿಧಾನಸಭಾ ಚುನಾವಣೆಯಲ್ಲಿ ಶೇ 10 ರಷ್ಟಿದ್ದ ಬಿಜೆಪಿಯ ಮತಗಳು 2019 ರಲ್ಲಿ ಶೇ 41 ರಷ್ಟು ಹೆಚ್ಚಾಗಲು ಈ 43 ಸ್ಥಾನಗಳ ಪಾತ್ರ ಅಧಿವಾಗಿದೆ.

ಕೊರೊನಾ ಹೆಚ್ಚಾಗುತ್ತಿದ್ದರೂ, ರಾಜಕೀಯ ನಾಯಕರು ಪ್ರಚಾರ ರ್‍ಯಾಲಿ ನಿಲ್ಲಿಸಿಲ್ಲ. ಕೇಂದ್ರ ಸಚಿವ ಅಮಿತ್ ಶಾ  ಬುಧವಾರ ಮೂರು ರ್‍ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ನಾಲ್ಕು ರೋಡ್ ಶೋಗಳನ್ನು ಮಾಡಲಿದ್ದಾರೆ. ಬಿಜೆಪಿಯ ಸುವೇಂಧು ಅಧಿಕಾರಿ ಕೋಲ್ಕತ್ತಾದಲ್ಲಿ ಮೂರು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...