Homeಮುಖಪುಟಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.

ಬುಧವಾರ (ಮಾ.25) ಬಿಜೆಪಿ ಪ್ರಕಟಿಸಿದ 19 ಅಭ್ಯರ್ಥಿಗಳ ಪಟ್ಟಿಯಲ್ಲಿ ಸಂತ್ರಸ್ತೆಯ ತಾಯಿ ರತ್ನ ದೇಬ್ನಾಥ್ ಅವರ ಹೆಸರಿದೆ. ರತ್ನಾ ಅವರು ಉತ್ತರ 24 ಪರಗಣ ಜಿಲ್ಲೆಯ ಪಾಣಿಹತಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಪಾಣಿಹತಿ ಕ್ಷೇತ್ರದಲ್ಲಿ 2011ರಿಂದ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಿರ್ಮಲ್ ಘೋಷ್ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿ ಈ ಕ್ಷೇತ್ರದಿಂದ ನಿರ್ಮಲ್ ಘೋಷ್ ಅವರ ಮಗ ತೀರ್ಥಂಕರ ಘೋಷ್ ಅವರನ್ನು ಟಿಎಂಸಿ ಕಣಕ್ಕಿಳಿಸಿದೆ.

ತನ್ನ ಮಗಳಿಗೆ ನ್ಯಾಯ ದೊರಕಿಸಿ ಕೊಡಲು ಮತ್ತು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಕಾಪಾಡಲು ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ರತ್ನ ದೇಬ್ನಾಥ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಗುರುವಾರ ವರದಿ ಮಾಡಿದೆ.

“ಮಹಿಳೆಯರ ಸುರಕ್ಷತೆಯೇ ನನ್ನ ಏಕೈಕ ಕಾಳಜಿ” ಎಂದಿರುವ ರತ್ನ ದೇಬ್ನಾಥ್, “ಪ್ರತಿಭಟಿಸುವುದು ಹೇಗೆ ಎಂಬುದನ್ನು ಮರೆತಿರುವವರಿಗಾಗಿ ನಾನು ಧ್ವನಿ ಎತ್ತುತ್ತೇನೆ” ಎಂದಿದ್ದಾರೆ.

“ನಾನು ಜನರಿಗೆ ಸೇವೆ ಸಲ್ಲಿಸಲು ಸಾಧ್ಯವಾದರೆ, ನನ್ನ ಮಗಳು ಕೂಡ ಸಂತೋಷಪಡುತ್ತಾಳೆ. ಪಶ್ಚಿಮ ಬಂಗಾಳದಾದ್ಯಂತ ಕಮಲ ಅರಳಬೇಕು ಮತ್ತು ಟಿಎಂಸಿಯನ್ನು ಬೇರು ಸಹಿತ ಕಿತ್ತುಹಾಕಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರ ಬೀಳಲಿದೆ.

ಆಗಸ್ಟ್ 9, 2024ರಂದು, 31 ವರ್ಷದ ತರಬೇತಿ ವೈದ್ಯೆ ಕೋಲ್ಕತ್ತಾದ ಸರ್ಕಾರಿ ಸಂಸ್ಥೆಯಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದರು. ಬಳಿಕ, ಯುವ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬುವುದು ಬಯಲಾಗಿತ್ತು. ಈ ಘಟನೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಕರಣದಲ್ಲಿ ಬಂಧಿತನಾದ ಸಂಜಯ್ ರಾಯ್‌ ಎಂಬಾತನಿಗೆ 2025ರ ಜನವರಿಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಮೇಲ್ಮನವಿಯನ್ನು ಫೆಬ್ರವರಿ 2025 ರಲ್ಲಿ ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಘಟನೆ ಬೆಳಕಿಗೆ ಬಂದ ನಂತರ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ಸಂಘವು ಹಿರಿಯ ಅಧಿಕಾರಿಗಳ ರಾಜೀನಾಮೆ ಮತ್ತು ರಾಜ್ಯದ ವೈದ್ಯಕೀಯ ಕೇಂದ್ರಗಳಲ್ಲಿನ ‘ಬೆದರಿಕೆ ಸಂಸ್ಕೃತಿ’ಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಹಲವಾರು ವಾರಗಳ ಕಾಲ ಪ್ರತಿಭಟನೆ ನಡೆಸಿತ್ತು.

ವೈದ್ಯರು ಮುಷ್ಕರ ನಡೆಸಿದ್ದರಿಂದ ಪಶ್ಚಿಮ ಬಂಗಾಳದಾದ್ಯಂತ ಹಲವಾರು ವಾರಗಳ ಕಾಲ ಆರೋಗ್ಯ ಸೇವೆಗಳು ವ್ಯತ್ಯಯಗೊಂಡಿದ್ದವು.

ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿರುವ ಆರೋಪ ಮತ್ತು ವೈದ್ಯಕೀಯ ಸೌಲಭ್ಯದಲ್ಲಿನ ಭ್ರಷ್ಟಾಚಾರದ ಆರೋಪಗಳನ್ನು ಸಿಬಿಐ ಪ್ರತ್ಯೇಕವಾಗಿ ಪರಿಶೀಲಿಸುತ್ತಿದೆ. ಪ್ರಕರಣದ ಆರೋಪಿಗಳಲ್ಲಿ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಉಸ್ತುವಾರಿ ಅಧಿಕಾರಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...