Homeಮುಖಪುಟಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕೊನೆಯ ದಿನವಾಗಿತ್ತು. ಈ ಹಿನ್ನೆಲೆ ಬಂಗಾಳದ ಚುನಾವಣಾ ಕೇಂದ್ರ ಬಿಂದುವಾಗಿರುವ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ಮಹಿಳಾ ಸುರಕ್ಷತೆಯನ್ನು ಆಧಾರವಾಗಿಟ್ಟುಕೊಂಡು ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸಿವೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದರೆ, ಬಿಜೆಪಿ ಪಕ್ಷದಲ್ಲೇ ಅಲ್ಲಿನ ಓರ್ವ ಮಹಿಳೆಯ ಹತ್ಯೆ ನಡೆಸಲು ಸಂಚು ರೂಪಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರ 85 ವರ್ಷದ ತಾಯಿಯ ಸಾವನ್ನು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪದೇ ಪದೇ ಪ್ರಸ್ತಾಪಿಸುತ್ತಿದೆ. ನಂದಿಗ್ರಾಮ್‌ನಲ್ಲಿ ರೋಡ್ ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಘಟನೆಯನ್ನು ಉಲ್ಲೇಖಿಸಿ ಟಿಎಂಸಿಯನ್ನು ಸೋಲಿಸಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇನ್ನು 15 ದಿನ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿ ನಡೆಸುವಂತಿಲ್ಲ- ಸಿಎಂ ಯಡಿಯೂರಪ್ಪ

ನಂದಿಗ್ರಾಮದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಅವರು (ಬಿಜೆಪಿ) ತಮ್ಮದೆ ಜನರನ್ನು ಕೊಲ್ಲುವ ಯೋಜನೆಯನ್ನು ಹೊಂದಿದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶಗಳಿಂದ ಗೂಂಡಾಗಳನ್ನು ಕರೆಸಿದ್ದಾರೆ. ನಂತರ ಅದನ್ನು ನಮ್ಮ ಕಾರ್ಯಕರ್ತರ ಮೇಲೆ ಹಾಕುವ ಯೋಜನೆ ಹೊಂದಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಮಾಹಿತಿ ಇದೆ. ಜಾಗರೂಕರಾಗಿರಿ” ಎಂದು ಆರೋಪಿಸಿದ್ದಾರೆ.

ಇತ್ತ, ಮತ್ತೊಂದು ರ್‍ಯಾಲಿಯಲ್ಲಿ ಮಾತನಾಡಿರುವ ಅಮಿತ್ ಶಾ, ‘ನಾನಿಲ್ಲಿಗೆ ತಲುಪಿದ ಕೂಡಲೇ ಒಂದು ದುಃಖದ ಸುದ್ದಿ ಕೇಳಿದೆ. ಮಮತಾ ಬ್ಯಾನರ್ಜಿ ಅವರು ಇರುವ ಸ್ಥಳದ 5 ಕಿ.ಮೀ ವ್ಯಾಪ್ತಿಯೊಳಗೆ ಮಹಿಳೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಇರುವ ಪ್ರದೇಶದಲ್ಲಿಯೇ ಅತ್ಯಾಚಾರ ನಡೆದಿದೆ ಎಂದಾದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ಹೇಗೆ ಸಾಧ್ಯ’ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ಮಹಿಳೆಯರು ಸುರಕ್ಷತೆಯಿಂದ ಇರಬೇಕೆಂದರೆ, ಬಂಗಾಳದಲ್ಲಿ ಬದಲಾವಣೆ ತರಬೇಕೆಂದರೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲುವುದನ್ನು ಮುಖ್ಯ ಎಂದು ಅಮಿತ್ ಶಾ ಹೇಳಿದ್ದಾರೆ. ಒಟ್ಟಾರೆ ಏಪ್ರಿಲ್ 2 ರಂದು ನಡೆಯಲಿರುವ ನಂದಿಗ್ರಾಮ ಚುನಾವಣೆ ಮೇಲೆ ಎಲ್ಲ ಕಣ್ಣು ನೆಟ್ಟಿದೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನೊಬ್ಬ ಅತ್ಯಾಚಾರದ ಆರೋಪದಲ್ಲಿ ಬಂಧಿತನಾಗಿದ್ದಾನೆ. ಇಲ್ಲಿ ಬಿಜೆಪಿ ಬೇರೆಯವರಿಗೆ ಪಾಠ ಹೇಳುತ್ತಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಓ’ಬ್ರಿಯಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ. “ಅವರು ಮೊದಲ ಬಾರಿಗೆ ನಂದಿಗ್ರಾಮಕ್ಕೆ ಭೇಟಿ ನೀಡಿದರು, ರೋಡ್ ಶೋ ನಡೆಸಿದರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಅವರು ಮತ್ತೆಂದು ನಂದಿಗ್ರಾಮದಲ್ಲಿ ತಮ್ಮ ಮುಖ ತೋರಿಸಲಾರರು” ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...