Homeಮುಖಪುಟಪಶ್ಚಿಮ ಬಂಗಾಳ: ಇವಿಎಂ ಜೊತೆಗೆ ಟಿಎಂಸಿ ಮುಖಂಡನ ಮನೆಯಲ್ಲಿ ತಂಗಿದ್ದ ಅಧಿಕಾರಿ ಅಮಾನತು

ಪಶ್ಚಿಮ ಬಂಗಾಳ: ಇವಿಎಂ ಜೊತೆಗೆ ಟಿಎಂಸಿ ಮುಖಂಡನ ಮನೆಯಲ್ಲಿ ತಂಗಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಇವಿಎಂ ಜೊತೆಗೆ ತೃಣಮೂಲ ಕಾಂಗ್ರೆಸ್ ಮುಖಂಡನಾದ ತನ್ನ ಸಂಬಂಧಿಕರ ಮನೆಯಲ್ಲಿ ತಂಗಿದ್ದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಮತದಾನದಲ್ಲಿ ಅವರು ತೆಗೆದುಕೊಂಡು ಹೋಗಿದ್ದ ಮೀಸಲು ಇವಿಎಂ ಮತ್ತು ವಿವಿಪ್ಯಾಟ್‌ ಮತದಾನದಲ್ಲಿ ಬಳಸುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಉತ್ತರ ಉಲುಬೇರಿಯಾದಲ್ಲಿ ಹೌರಾದ ಸೆಕ್ಟರ್ 17 ರ ನಿಯೋಜಿತ ಅಧಿಕಾರಿ ತಪನ್ ಸರ್ಕಾರ್ ಅವರು ತಮ್ಮ ಸಂಬಂಧಿಕರಾಗಿರುವ ಟಿಎಂಸಿ ನಾಯಕರ ಮನೆಗೆ ರಾತ್ರಿ ಮಲಗಲು ಹೋಗುವಾಗ ಜೊತೆಯಲ್ಲಿ ಮೀಸಲು ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಚುನಾವಣಾ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಆಯೋಗದ ಸೂಚನೆಗಳನ್ನು ಉಲ್ಲಂಘಿಸಿರುವುದರಿಂದ ಅವರೊಂದಿಗೆ ಇದ್ದ ಪೊಲೀಸ್ ಅಧಿಕಾರಿಗಳು ಸಹ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

“ಇದು ಭಾರತದ ಚುನಾವಣಾ ಆಯೋಗದ ಸೂಚನೆಗಳ ಸಂಪೂರ್ಣ ಉಲ್ಲಂಘನೆಯಾಗಿದ್ದು, ಇದಕ್ಕಾಗಿ ವಲಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸೆಕ್ಟರ್ ಅಧಿಕಾರಿ ಜತೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಅಮಾನತಿಗೂ ನಿರ್ದೇಶಿಸಲಾಗಿದೆ” ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಧಿಕಾರಿ ತಪನ್ ಸರ್ಕಾರ್ ಬಳಿಯಿದ್ದ ಮತಯಂತ್ರಗಳನ್ನು ಮತ್ತು ವಿವಿಪ್ಯಾಟ್‌ಗಳನ್ನು ವಾಪಸ್ ಪಡೆದು ಪರಿಶೀಲಿಸಲಾಗಿದೆ. ಇವುಗಳನ್ನು ಪ್ರತ್ಯೇಕ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಬಳಸುವುದಿಲ್ಲ ಎಂದು ಆಯೋಗ ಹೇಳಿದೆ.

ಇತ್ತಿಚೆಗೆ ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಿ, ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಪಶ್ಚಿಮ ಬಂಗಾಳದ ಎಂಟು ಹಂತದ ವಿಧಾನಸಭಾ ಚುನಾವಣೆಯಲ್ಲಿ ಮಂಗಳವಾರ ಮೂರನೇ ಹಂತದ ಮತದಾನ ನಡೆಯುತ್ತಿದೆ ಸ್ಥಾನದಲ್ಲಿದೆ.


ಇದನ್ನೂ ಓದಿ: ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...