ಬಂಗಾಳ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ಮಾನವ ಹಕ್ಕುಗಳ ಆಯೋಗ | NaanuGauri

ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಶಿಫಾರಸ್ಸು ಮಾಡಿದೆ. ಆಪಾದಿತ ಹಿಂಸಾಚಾರದ ಬಗ್ಗೆ ತನಿಖೆ ನಡೆಸುವಂತೆ ಕೊಲ್ಕತ್ತಾ ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಈ ಹಿಂದೆ ನಿರ್ದೇಶಿಸಿತ್ತು.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ರಚಿಸಿದ ಸಮಿತಿಯು ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆ ನಡೆಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ಪಶ್ಚಿಮ ಬಂಗಾಳದಲ್ಲಿ “ಕಾನೂನಿನ ನಿಯಮದ ಬದಲು ಆಡಳಿತಗಾರರ ಕಾನೂನು” ಎಂಬ ಪರಿಸ್ಥಿತಿ ಇದೆ ಎಂದು ಪ್ರತಿಪಾದಿಸಿರುವ ಆಯೋಗ, “ಕೊಲೆ ಮತ್ತು ಅತ್ಯಾಚಾರದಂತಹ ಭೀಕರ ಅಪರಾಧಗಳ” ಬಗ್ಗೆ ಸಿಬಿಐ ತನಿಖೆ ಮಾಡಬೇಕು ಎಂದು ಶಿಫಾರಸು ಮಾಡಿದ್ದು, ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆಗೆ ಒಳಪಡಿಸಬೇಕು ಎಂದು ಹೇಳಿದೆ.

ಹಿಂಸಾಚಾರದ ಪರಿಣಾಮವಾಗಿ ಜನರು ಹಲ್ಲೆಗೆ ಒಳಗಾಗಿದ್ದಾರೆ, ಮನೆಗಳಿಂದ ಪಲಾಯನ ಮಾಡಿದ್ದಾರೆ ಮತ್ತು ಆಸ್ತಿಪಾಸ್ತಿ ನಾಶವಾಗಿದೆ ಎಂದು ವರದಿ ಹೇಳಿದೆ.

“ಇದು ಮುಖ್ಯ ವಿರೋಧ ಪಕ್ಷದ ಬೆಂಬಲಿಗರ ವಿರುದ್ಧ ಆಡಳಿತ ಪಕ್ಷದ ಬೆಂಬಲಿಗರು ಮಾಡಿದ ಪ್ರತೀಕಾರದ ಹಿಂಸಾಚಾರ” ಎಂದು ಮಾನವ ಹಕ್ಕುಗಳ ಆಯೋಗ ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

ಇದನ್ನೂ ಓದಿ: ಪಶ್ಚಿಮ ಬಂಗಾಳ: ಅಪ್ರಾಪ್ತ ದಲಿತ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ, ವಿವಸ್ತ್ರಗೊಳಿಸಿ ದೌರ್ಜನ್ಯ

LEAVE A REPLY

Please enter your comment!
Please enter your name here