Homeಮುಖಪುಟಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ ‘ಗಂಭೀರ ದುರ್ನಡತೆ’ ಆರೋಪ ಮಾಡಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ‘ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗ’ದ ಆರೋಪಗಳನ್ನು ಈ ಅಧಿಕಾರಿಗಳ ವಿರುದ್ಧ ಮಾಡಲಾಗಿದೆ.

ಎಲ್ಲಾ ಏಳು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮುರ್ಷಿದಾಬಾದ್ ಜಿಲ್ಲೆಯ ಸಂಶೀರ್‌ಗಂಜ್‌ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶಿಫಾವುರ್ರಹ್ಮಾನ್, ಫರಕ್ಕಾ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಫರಕ್ಕಾದ ಕಂದಾಯ ಅಧಿಕಾರಿ ನಿತೀಶ್ ದಾಸ್, ಮಾಯನಗುರಿ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಮಹಿಳಾ ಅಭಿವೃದ್ಧಿ ಅಧಿಕಾರಿ ಡಾಲಿಯಾ ರೇ ಚೌಧರಿ, ಸೂಟಿ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಸೂಟಿಯ ಸಹಾಯಕ ಕೃಷಿ ನಿರ್ದೇಶಕ ಶೇಕ್ ಮುರ್ಷಿದ್ ಆಲಂ, ಕ್ಯಾನಿಂಗ್ ಪರ್ಬೋ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಇಬ್ಬರು ಅಧಿಕಾರಿಗಳಾದ ಜಂಟಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಸತ್ಯಜಿತ್ ದಾಸ್ ಮತ್ತು ಫೀಲ್ಡ್ ಎಲೆಕ್ಷನ್ ಆಫೀಸರ್ ಜಯದೀಪ್ ಕುಂಡು, ದೆಬ್ರಾ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಜಂಟಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೆಬಾಶಿಸ್ ಬಿಸ್ವಾಸ್ ಅಮಾನತುಗೊಂಡವರು.

ಈ ಎಲ್ಲಾ ಅಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮ ಪ್ರಕಟಣೆಗಾಗಿ ಬಾಕಿ ಉಳಿದಿದ್ದ ಪ್ರಕರಣಗಳ ಪರಿಶೀಲನೆಯ ಸಂದರ್ಭದಲ್ಲಿ, ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೂ ಅನೇಕ ಪ್ರಕರಣಗಳನ್ನು ವಿಲೇವಾರಿ ಮಾಡಿರುವುದು ಕಂಡುಬಂದಿದೆ. ಮತದಾರರ ಅರ್ಹತೆ ಮತ್ತು ಮ್ಯಾಪಿಂಗ್‌ನಲ್ಲಿ ಅಸಮಂಜಸತೆಗಳಿದ್ದರೂ ಸಹ ಅವರು ಯಾವುದೇ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಆ ಮೂಲಕ, ಅನರ್ಹ ಪ್ರಕರಣಗಳನ್ನು ಅನುಮೋದಿಸಿ ತಮ್ಮ ಶಾಸನಬದ್ಧ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 13ಸಿಸಿ ಅಡಿಯಲ್ಲಿ ತನಗೆ ನೀಡಲಾದ ಅಧಿಕಾರವನ್ನು ಬಳಸಿಕೊಂಡು, ಪಶ್ಚಿಮ ಬಂಗಾಳದ 7 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಚುನಾವಣಾ ಆಯೋಗವು ಅಮಾನತುಗೊಳಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗಂಭೀರ ದುರ್ನಡತೆ, ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ (ಫೆ.16) ತನ್ನ ಆದೇಶದಲ್ಲಿ ತಿಳಿಸಿದೆ.

ಸಂಬಂಧಪಟ್ಟ ಕೇಡರ್ ನಿಯಂತ್ರಣ ಪ್ರಾಧಿಕಾರಗಳು ಈ ಅಧಿಕಾರಿಗಳ ವಿರುದ್ಧ ಯಾವುದೇ ವಿಳಂಬವಿಲ್ಲದೆ ಶಿಸ್ತು ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಆದೇಶಿಸಿದ ಆಯೋಗವು, ಈ ಕುರಿತಾದ ಪ್ರಗತಿಯನ್ನು ತನಗೆ ತಿಳಿಸಬೇಕು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...