Homeಮುಖಪುಟಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

- Advertisement -
- Advertisement -

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ ರಷ್ಯಾದ ಸೆಂಟ್ ಬಾಸಿಲ್ಸ್ ಕ್ಯಾಥೆಡ್ರಲ್, ಈಜಿಪ್ಟ್‌ನ ಪಿರಮಿಡ್‌ಗಳು, ಪ್ಯಾರಿಸ್‌ನ ಐಫೆಲ್ ಟವರ್ ಹಾಗೂ ರಿಯೋ ಡಿ ಜನೇರೋದ ‘ಕ್ರೈಸ್ಟ್ ದ ರಿಡೀಮರ್’ ಪ್ರತಿಮೆಗಳು ಎದ್ದು ಕಾಣಿಸುತ್ತವೆ.

ಆದರೆ, ಅದರಲ್ಲಿ ಬಂಗಾಳದ ಸಂಸ್ಕೃತಿ ಅಥವಾ ತಾಣಗಳು ಎಲ್ಲೂ ಕಾಣಿಸುವುದಿಲ್ಲ. ಕೇವಲ ಕೋಲ್ಕತ್ತಾದ ಐಕಾನಿಕ್ ‘ಹೌರಾ ಸೇತುವೆ’ ಮಾತ್ರ ಕಣ್ಣು ಮುಚ್ಚಿ ತೆರೆಯುವುದರೊಳಗೆ ಬಂದು ಹೋಗುತ್ತದೆ. ಇದನ್ನು ನೋಡಿರುವ ನೆಟ್ಟಿಗರು, “ಅಷ್ಟಕ್ಕೂ ಈ ಜಾಹೀರಾತಿನಲ್ಲಿ ಬಂಗಾಳ ಎಲ್ಲಿದೆ?” ಎಂದು ಪ್ರಶ್ನಿಸುತ್ತಿದ್ದಾರೆ.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಬಂಗಾಳ ಪ್ರವಾಸೋದ್ಯಮದ ನೂತನ ಲೋಗೋ ಮತ್ತು ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಈ ಜಾಹೀರಾತನ್ನು ಬಿಡುಗಡೆ ಮಾಡಲಾಗಿತ್ತು. ಜೊತೆಗೆ ಸುಂದರ ಮ್ಯಾಂಗ್ರೋವ್ ಕಾಡುಗಳಿಂದ ಹಿಡಿದು ಹಿಮಾಲಯದ ಶಿಖರಗಳವರೆಗಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂಪಾಯಿಗಳ ಹೊಸ ಯೋಜನೆಯನ್ನೂ ಅವರು ಘೋಷಿಸಿದ್ದರು.

ಮಮತಾ ಬ್ಯಾನರ್ಜಿ ಬ್ರ್ಯಾಂಡಿಂಗ್‌ಗೆ ಪರ್ಯಾಯ ಯತ್ನ: ಎಡವಿದ ಜಾಹೀರಾತು!

ಪಶ್ಚಿಮ ಬಂಗಾಳದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸಲು ಮತ್ತು ಮೂಲಸೌಕರ್ಯ, ಸಂಪರ್ಕ ಹಾಗೂ ಪ್ರವಾಸಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಸುಮಾರು 500 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಶುಕ್ರವಾರ ಪ್ರಕಟಿಸಿದ್ದಾರೆ. ಇದೇ ವೇಳೆ ಅವರು ರಾಜ್ಯ ಪ್ರವಾಸೋದ್ಯಮದ ನೂತನ ಲೋಗೋ ಹಾಗೂ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದರು.

‘ವೆಸ್ಟ್ ಬೆಂಗಾಲ್: ವೇರ್ ಇಂಡಿಯಾ ಫೀಲ್ಸ್ ಡಿಫರೆಂಟ್’ (ಪಶ್ಚಿಮ ಬಂಗಾಳ: ಇಲ್ಲಿ ಭಾರತ ಭಿನ್ನವಾಗಿ ಅನುಭವಕ್ಕೆ ಸಿಗುತ್ತದೆ) ಎಂಬ ಹೊಸ ಟ್ಯಾಗ್‌ಲೈನ್ ಹೊಂದಿರುವ ಲೋಗೋವನ್ನು ಧನ ಧಾನ್ಯ ಸಭಾಂಗಣದಲ್ಲಿ ವೈಭವದಿಂದ ಬಿಡುಗಡೆ ಮಾಡಲಾಯಿತು. ಈ ಹಿಂದೆ ಮಮತಾ ಬ್ಯಾನರ್ಜಿ ಸರ್ಕಾರದ ಅವಧಿಯಲ್ಲಿದ್ದ ಪ್ರಸಿದ್ಧ ‘ಬಿಸ್ವ ಬಾಂಗ್ಲಾ’ ಬ್ರ್ಯಾಂಡಿಂಗ್‌ ಅನ್ನು ಬದಲಿಸಿ, ಬಿಜೆಪಿ ಸರ್ಕಾರವು ಹೊಸ ಇಮೇಜ್ ನೀಡಲು ಈ ಹೆಜ್ಜೆ ಇಟ್ಟಿತ್ತು.

ಜಾಹೀರಾತಿನ ಆರಂಭದಲ್ಲಿ ಹೌರಾ ಸೇತುವೆಯನ್ನು ತೋರಿಸುವ ಮೂಲಕ ಭರವಸೆಯಿಂದ ಆರಂಭವಾಗುವ ಈ ವಿಡಿಯೋ, ನಂತರ ತಟ್ಟನೆ ರಾಜ್ಯದ ಗಡಿಯನ್ನೇ ದಾಟಿ ದೂರದ ಮರುಭೂಮಿ, ಪಿರಮಿಡ್‌ ಹಾಗೂ ಬಂಗಾಳಕ್ಕೆ ಯಾವುದೇ ಸಂಬಂಧವಿಲ್ಲದ ವಿದೇಶಿ ಹೆಗ್ಗುರುತುಗಳನ್ನು ಪ್ರದರ್ಶಿಸುತ್ತದೆ. ಬಂಗಾಳದ ಹೆಮ್ಮೆಯ ವಿಕ್ಟೋರಿಯಾ ಮೆಮೋರಿಯಲ್, ಬಿಷ್ಣುಪುರದ ಟೆರಾಕೋಟಾ ದೇವಸ್ಥಾನಗಳು ಹಾಗೂ ಡಾರ್ಜಿಲಿಂಗ್‌ನ ಪ್ರಸಿದ್ಧ ಟಾಯ್ ಟ್ರೈನ್ ಜಾಹೀರಾತಿನಿಂದ ಸಂಪೂರ್ಣವಾಗಿ ಕಣ್ಮರೆಯಾಗಿವೆ.

ವಿಪಕ್ಷಗಳು ಹಾಗೂ ರಾಜಕೀಯ ವಿಶ್ಲೇಷಕರ ತೀವ್ರ ಆಕ್ರೋಶ

ಈ ಜಾಹೀರಾತಿನ ವಿಪರ್ಯಾಸವನ್ನು ಕಂಡು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಟಿಎಂಸಿ ಸಂಸದ ಡೆರೆಕ್ ಒಬ್ರೇನ್, “ಈ ಜಾಹೀರಾತನ್ನು ‘ಕಸ’ ಎಂದು ಕರೆಯುವುದು ಕೂಡ ತೀರಾ ಸಣ್ಣ ಮಾತು” ಎಂದು ಟ್ವೀಟ್ ಮಾಡಿದ್ದಾರೆ.

ತ್ರಿಪುರ ಮತ್ತು ಮೇಘಾಲಯದ ಮಾಜಿ ರಾಜ್ಯಪಾಲ ತಥಾಗತ ರಾಯ್ ಈ ವಿಡಿಯೋವನ್ನು ‘ದಡ್ಡತನದಿಂದ ಕೂಡಿದ ಅಮಲ್ಚೂರ್ ಪ್ರಯತ್ನ’ ಎಂದು ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ವಿಡಿಯೋದಲ್ಲಿ ಮೊಸ್ಕೋ, ಈಜಿಪ್ಟ್ ಮತ್ತು ರಿಯೋ ಡಿ ಜನೇರೋ ದೃಶ್ಯಗಳು ಏಕಿರಬೇಕು? ಇದು ಬಿಜೆಪಿ ಸರ್ಕಾರದ ಸಾಧನೆಗಳಿಗೆ ತಂದ ಅಪಚಾರ. ಈ ವಿಡಿಯೋವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಇದನ್ನು ವಿನ್ಯಾಸಗೊಳಿಸಿದ ವ್ಯಕ್ತಿಯನ್ನು ಮೀನುಗಾರಿಕೆ ಅಥವಾ ಬೇರಾವುದಾದರೂ ಇಲಾಖೆಗೆ ವರ್ಗಾಯಿಸಬೇಕು ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಳಕೆದಾರರೊಬ್ಬರು ‘ಈ ಜಾಹೀರಾತಿನ ಗುತ್ತಿಗೆಯನ್ನು ಯಾವುದಾದರೂ ಗುಜರಾತ್ ಮೂಲದ ಏಜೆನ್ಸಿಗೆ ನೀಡಲಾಗಿದೆಯೇ?’ ಎಂದು ವ್ಯಂಗ್ಯವಾಡಿದ್ದರೆ, ರಾಜಕೀಯ ವಿಶ್ಲೇಷಕ ಮಯೂಖ್ ರಂಜನ್ ಘೋಷ್, “ಬಂಗಾಳದಲ್ಲಿ ಬೆಟ್ಟಗಳಿಂದ ಹಿಡಿದು ಸಮುದ್ರದವರೆಗೆ, ಕಾಡುಗಳಿಂದ ಹಿಡಿದು ನಗರಗಳವರೆಗೆ ಎಲ್ಲವೂ ಇರುವಾಗ, ಐಫೆಲ್ ಟವರ್ ಮತ್ತು ಸೇಂಟ್ ಪೀಟರ್ಸ್‌ಬರ್ಗ್‌ಗೆ ಉಚಿತ ಪ್ರಚಾರ ನೀಡುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಹಾಗೆಯೇ, ಕೇರಳ ಪ್ರವಾಸೋದ್ಯಮದ ‘ಗಾಡ್ಸ್ ಓನ್ ಕಂಟ್ರಿ’ ಅಥವಾ ರಾಜಸ್ಥಾನದ ‘ಪಧಾರೊ ಮ್ಹಾರೆ ದೇಶ್’ ಎಂಬ ಆತ್ಮೀಯ ಟ್ಯಾಗ್‌ಲೈನ್‌ಗಳಿಗೆ ಹೋಲಿಸಿದರೆ, ಬಂಗಾಳದ ಹೊಸ ಟ್ಯಾಗ್‌ಲೈನ್ ತೀರಾ ನೀರಸವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಒಟ್ಟಿನಲ್ಲಿ, ಬಂಗಾಳದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹೊರಟ ಈ ಜಾಹೀರಾತು ’80 ಸೆಕೆಂಡುಗಳಲ್ಲಿ ಪ್ರಪಂಚ ಸುತ್ತಿ’ ಎಂಬ ಚಲನಚಿತ್ರದ ಟ್ರೇಲರ್‌ನಂತೆ ಕಾಣುತ್ತಿರುವುದು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...